Thursday, August 20, 2026

BDA Apartments

Home Front Page ಹಾನಗಲ್ ಮತ್ತು ಸಿಂದಗಿಯಲ್ಲಿ ಕಾಂಗ್ರೆಸ್ ಪರ ಅಲೆ- ಮಾಜಿ ಸಿಎಂ ಸಿದ್ಧರಾಮಯ್ಯ.

ಹಾನಗಲ್ ಮತ್ತು ಸಿಂದಗಿಯಲ್ಲಿ ಕಾಂಗ್ರೆಸ್ ಪರ ಅಲೆ- ಮಾಜಿ ಸಿಎಂ ಸಿದ್ಧರಾಮಯ್ಯ.

ಶಿವಮೊಗ್ಗ,ಅಕ್ಟೋಬರ್,23,2021(www.justkannada.in):  ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಲೆಯಿದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ನುಡಿದರು.

ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿವೆ  ಎಂದು ವಾಗ್ದಾಳಿ ನಡೆಸಿದರು.

ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ನಮ್ಮ ಸರ್ಕಾರದಲ್ಲಿ ಹಲವು ಯೋಜನೆಗಳನ್ನು ಕೊಟ್ಟಿದ್ದೇವು. ಆ ಯೋಜನೆಗಳನ್ನು ಜನರು ನೆನಪು ಮಾಡಿಕೊಳ್ಳುತ್ತಿದ್ದಾರೆ ಎಂದು ಸಿದ್ಧರಾಮಯ್ಯ ಹೇಳಿದರು.

Key words:  wave -pro-Congress -Honagal – Sindagi-by-election-Former CM -Siddaramaiah.