ಮಾಜಿ ಸಚಿವ ಎಚ್.ವಿಶ್ವನಾಥ್ ಒಂಟಿಯಲ್ಲ ಅವರ ಜೊತೆ ನಾವಿದ್ದೇವೆ ಎಂದ ಬಿ.ಸಿ.ಪಾಟೀಲ್

ತುಮಕೂರು, ಫೆಬ್ರವರಿ 08, 2020 (www.justkannada.in): ಮಾಜಿ ಸಚಿವ ಎಚ್.ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್, ಮಹೇಶ್ ಕುಮಟಳ್ಳಿ, ಶಂಕರ್ ಸೇರಿದಂತೆ ಯಾರೂ ಕೂಡ ಒಂಟಿಯಲ್ಲ ಎಂದು ನೂತನ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.

ಸಿದ್ದಗಂಗಾ ಮಠಕ್ಕೆ ಆಗಮಿಸಿದ ಅವರು ಲಿಂಗೈಕ್ಯ ಶ್ರೀ ಶಿವಕುಮಾರಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸಿದ್ದಗಂಗಾ ಸ್ವಾಮೀಜಿ ಅವರ ಆಶೀರ್ವಾದ ಪಡೆದು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನಾವೆಲ್ಲರೂ ಜೊತೆಯಾಗಿದ್ದೇವೆ. ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಮೂರುವರೆ ವರ್ಷಗಳ ಕಾಲ ಸುಭದ್ರ ಆಡಳಿತ ನಡೆಯಲಿದೆ. ಯಡಿಯೂರಪ್ಪ ಅವರ ಮೇಲೆ ನಂಬಿಕೆ ಇಟ್ಟು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು.

ರಮೇಶ್ ಜಾರಕಿಹೊಳಿ ನಮ್ಮ ನಾಯಕ ಎಂದು ಎಲ್ಲೂ ಹೇಳಿಲ್ಲ. ನಾವೆಲ್ಲರೂ ಸ್ನೇಹಿತರು ಮೈತ್ರಿ ಸರ್ಕಾರದ ದುರಾಡಳಿತದಿಂದ ನಾವೆಲ್ಲರೂ ಸಮಾನ ಮನಸ್ಕರಾಗಿ ಹೊರಬಂದೆವು ಎಂದು ಹೇಳಿದರು.