Friday, October 16, 2026

Dasara Wishes

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ DasraWishes_JK DasraWishes JK
Happy Dasara
Home Front Page ನಾವು ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಏನೇ ಸಮಸ್ಯೆ ಇದ್ದರೂ ಹೇಳಿ- ಡಿಸಿಎಂ ಡಿಕೆ ಶಿವಕುಮಾರ್.

ನಾವು ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಏನೇ ಸಮಸ್ಯೆ ಇದ್ದರೂ ಹೇಳಿ- ಡಿಸಿಎಂ ಡಿಕೆ ಶಿವಕುಮಾರ್.

ಬೆಂಗಳೂರು, ಜನವರಿ,3,2024(www.justkannada.in) ನಾವು ಭಾವನೆ ಮೇಲೆ ರಾಜಕಾರಣ ಮಾಡಲ್ಲ. ಏನೇ ಸಮಸ್ಯೆ ಇದ್ದರೂ ನಮ್ಮ ಬಳಿ ಹೇಳಿ ಎಂದು ಜನಸ್ಪಂದನ ಕಾರ್ಯಕ್ರಮದಲ್ಲಿ  ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಇಂದು ಕೆ.ಆರ್​.ಪುರಂನ ಐಟಿಐ ಕ್ರೀಡಾಂಗಣದಲ್ಲಿ ಜನಸ್ಪಂದನ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು.  ಈ ವೇಳೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನೀವು ನಮ್ಮನ್ನು ಭೇಟಿ ಮಾಡಲು ಬಹಳ ಕಷ್ಟ ಆಗುತ್ತೆ. ಶಾಸಕರಿಗೆ ಬಹಳಷ್ಟು ಒತ್ತಡ ಇರುತ್ತೆ. ಹೀಗಾಗಿ ಎಲ್ಲಾ ಅಧಿಕಾರಿಗಳನ್ನು ಕರೆದುಕೊಂಡು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ನಿಮ್ಮ‌ ಸಮಸ್ಯೆ ಕೇಳಿಯೇ ಹೋಗುತ್ತೇನೆ.  ನನಗೆ ರಾಜಕಾರಣ ಮುಖ್ಯ ಅಲ್ಲ. ನಿಮ್ಮ ಬದುಕಿನ ಮೇಲೆ ರಾಜಕಾರಣ ಮಾಡಲ್ಲ. ನಾನು ನಿಮ್ಮ ಕಷ್ಟ ಕೇಳಲು ಇಲ್ಲಿಗೆ ಬಂದಿದ್ದೇನೆ ಎಂದು ಜನರನ್ನುದ್ಧೇಶಿಸಿ  ಹೇಳಿದರು.ನಾವು ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಏನೇ ಸಮಸ್ಯೆ ಇದ್ದರೂ ಹೇಳಿ- ಡಿಸಿಎಂ ಡಿಕೆ...

ಕಾರ್ಯಕ್ರಮದಲ್ಲಿ ಶಾಸಕರಾದ ಭೈರತಿ ಬಸವರಾಜ್ ಹಾಗೂ ಮಂಜುಳಾ ಲಿಂಬಾವಳಿ, ಮಾಜಿ ಶಾಸಕರಾದ ನಾಗೇಶ್, ಪೂರ್ಣಿಮಾ,  ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ವಿವಿಧ ಪ್ರಾಧಿಕಾರಿಗಳ ಅಧ್ಯಕ್ಷ ರಾಕೇಶ್ ಸಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Key words: We -don’t – politics – emotion-DCM- DK Shivakumar.