ನಮಗೆ ಸಂಪೂರ್ಣ ಬಹುಮತ ಇಲ್ಲ ಎಂದ್ರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್…

ಕಲ್ಬುರ್ಗಿ,ಸೆ,9,2019(www.justkannada.in): ನಮಗೆ ಸಂಪೂರ್ಣ ಬಹುಮತ ಇಲ್ಲ. ಹೀಗಾಗಿ ಎಲ್ಲರಿಗೂ ಸಚಿವ ಸ್ಥಾನ ನೀಡಲು ಆಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದರು.

ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ನಮ್ಮ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇಲ್ಲ. ಎಲ್ಲರಿಗೂ ಸಚಿವ ಸ್ಥಾನ ನೀಡಲು ಆಗಲ್ಲ. ಅನರ್ಹ ಶಾಸಕರ ಪ್ರಕರಣ ಇನ್ನು ಸುಪ್ರೀಂಕೋರ್ಟ್ ನಲ್ಲಿ ಇದೆ. ಪ್ರಕರಣ ಶೀಘ್ರದಲ್ಲಿ ವಿಚಾರಣೆ ನಡೆಯಲಿದೆ. ಇದೆಲ್ಲಾ ಆದ ನಂತರ ಈ ಭಾಗಕ್ಕೂ ಸಚಿವ ಸ್ಥಾನ ಸಿಗುತ್ತದೆ ಎಂದು ಕಲ್ಬುರ್ಗಿಯಲ್ಲಿ ತಿಳಿಸಿದರು.

Key words:  We – no majority- ”BJP president -Nalin Kumar Katil -kalburgi