ಪ್ರಧಾನಿ ಮೋದಿ ಅವರ ನಿರ್ದೇಶನಕ್ಕಾಗಿ ಕಾಯುತ್ತಿದ್ದೇವೆ- ಸಿಎಂ ಬಿಎಸ್ ಯಡಿಯೂರಪ್ಪ…

ಬೆಂಗಳೂರು,ಮೇ,5,2021(www.justkannada.in):  ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗಿರುವ ಹಿನ್ನೆಲೆ ಜನತಾ ಕರ್ಫ್ಯೂ ಜಾರಿಯಲ್ಲಿದ್ದು ಲಾಕ್ ಡೌನ್ ವಿಚಾರ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನಕ್ಕಾಗಿ ಕಾಯುತ್ತಿದ್ದೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.jk

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಪ್ರಧಾನಿ ಮೋದಿ ನಿರ್ದೇಶನದಂತೆ ನಡೆದುಕೊಳ್ಳುತ್ತೇವೆ. ಪ್ರಧಾನಿ ಹೇಳಿದಂತೆ ಲಾಕ್ ಡೌನ್ ಮಾಡುತ್ತೇವೆ. ಮೋದಿಯಿಂದ ಬರುವ ಸಲಹೆ ಸೂಚನೆಗಳನ್ನ ಪಾಲಿಸುತ್ತೇವೆ. ಪ್ರಧಾನಿ ಮೋದಿ ನಿರ್ಧಾರಕ್ಕೆ ನಾವು ಬದ್ಧ ಎಂದಿದ್ದಾರೆ.We -waiting - PM Modi's- direction-CM BS Yeddyurappa.

ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಸಲಿದ್ದು, ಕೊರೋನಾ ತಡಗಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಣೆ ಮಾಡುತ್ತಾರೆಯೇ…? ಎಂಬ ಕುತೂಹಲ ಮೂಡಿದೆ.

Key words: We -waiting – PM Modi’s- direction-CM BS Yeddyurappa.