ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ…

ನವದೆಹಲಿ,ಏಪ್ರಿಲ್,15,2021(www.justkannada.in): ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ತಡೆಗಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದಾರೆ.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ನವದೆಹಲಿಯಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದ್ದು ನಾಳೆಯಿಂದಲೇ ವೀಕೆಂಡ್ ಲಾಕ್ ಡೌನ್ ಜಾರಿಯಾಗುತ್ತದೆ ಎಂದು ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.weekend-curfew-enforced-national-capital-new-delhi

ವೀಕೆಂಡ್ ಕರ್ಫ್ಯೂ ವೇಳೆ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶವಿರುತ್ತದೆ. ಮಾರ್ಕೆಟ್, ಮಾಲ್ ಜಿಮ್ ಗಳು ಬಂದ್ ಆಗಲಿವೆ. ಹೋಟೆಲ್ ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಗೆ ಅವಕಾಶವಿರುತ್ತದೆ.  ಮದುವೆಗಳಲ್ಲಿ ಪಾಲ್ಗೊಳ್ಳಲು ಪಾಸ್ ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.

Key words: Weekend -curfew -enforced – national capital- New Delhi.