ವೀಕೆಂಡ್ ಕರ್ಫ್ಯೂ: ಅನಗತ್ಯವಾಗಿ ರಸ್ತೆಗಿಳಿದ ವಾಹನ ಸವಾರರಿಗೆ ಶಾಕ್: ಕಾರು, ಬೈಕ್ ಗಳನ್ನ ಸೀಜ್ ಮಾಡಿದ ಪೊಲೀಸರು…

ಬೆಂಗಳೂರು,ಏಪ್ರಿಲ್,24,2021(www.justkannada.in): ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ, ಟಫ್ ರೂಲ್ಸ್ ಜಾರಿಯಾಗಿದೆ. ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಫೀಲ್ಡಿಗಿಳಿದಿರುವ ಪೊಲೀಸರು ಅನಗತ್ಯವಾಗಿ ಓಡಾಡುವವರಿಗೆ ವಾಹನ ಸೀಜ್ ಮಾಡಿ ಬಿಸಿಮುಟ್ಟಿಸುತ್ತಿದ್ದಾರೆ.jk

ವೀಕೆಂಡ್ ಕರ್ಫ್ಯೂ ಹಿನ್ನೆಲೆ ಬೆಳಿಗ್ಗೆ 6ಗಂಟೆಯಿಂದ 10 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿ ಮಾಡಲಾಗಿತ್ತು.  ಆದರೆ ಈ ಸಮಯದಲ್ಲೂ ಅನಗತ್ಯ ಓಡಾಟ ನಡೆಸದಂತೆ ಸೂಚನೆ ನೀಡಲಾಗಿತ್ತು. ಆದರೂ ಜನರು ನಿಯಮ ಉಲ್ಲಂಘಿಸಿ ರಸ್ತೆಗಳಲ್ಲಿ ಬೇಕಾಬಿಟ್ಟಿ ಓಡಾಟ ನಡೆಸಿ ವಾಹನಗಳಲ್ಲಿ ಸಂಚರಿಸಿ ಬೇಜವಾಬ್ದಾರಿ ಮೆರೆದಿದ್ದಾರೆ.

ಬೆಂಗಳೂರಿನಲ್ಲಿ ನಿಯಮ ಉಲ್ಲಂಘಿಸಿ  ಬೇಕಾಬಿಟ್ಟಿ ಓಡಾಡುತ್ತಿದ್ದವರ ವಿರುದ್ಧ ಕ್ರಮ ಕೈಗೊಂಡಿರುವ ಪೊಲೀಸರು 93 ಬೈಕ್, 9 ಕಾರು, 3 ಆಟೋ ಸೇರಿದಂತೆ ಒಟ್ಟು 105 ವಾಹನಗಳನ್ನು ಸೀಜ್ ಮಾಡಿದ್ದಾರೆ. ಇನ್ನು ರಾಯಚೂರಿನಲ್ಲೂ ಪೊಲೀಸರು ಕಾರ್ಯಾಚರಣೆ ನಡೆಸಿ ಅನಗತ್ಯವಾಗಿ ಓಡಾಡುತ್ತಿದ್ದವರ ಮೇಲೆ ಕ್ರಮ ಜರುಗಿಸಿದ್ದಾರೆ. 25 ವಾಹನಗಳನ್ನ ಸೀಜ್ ಮಾಡಿದ್ದಾರೆ. ಡಿವೈಎಸ್ ಪಿ ಶಿವನಗೌಡಪಾಟೀಲ್ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಲ್ಲಿ  ಕಾರ್ಯಾಚರಣೆ ನಡೆಸಿ 25 ವಾಹನಗಳನ್ನ ಸೀಜ್ ಮಾಡಿದ್ದಾರೆ.

ಹಾಗೆಯೆ ಗದಗ ನಗರದಲ್ಲೂ ಸಹ ಪೊಲೀಸರು ಕಾರ್ಯಚಾರಣೆ ನಡೆಸಿ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದವರ  10 ವಾಹನವನ್ನ ಸೀಜ್ ಮಾಡಿದ್ದಾರೆ.   ಕಲ್ಬುರ್ಗಿ ತರಕಾರಿ ಮಾರುಕಟ್ಟೆಯಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿ ಮನೆಗೆ ಕಳುಹಿಸಿದ್ದಾರೆ.Weekend curfew-unnecessarily - Siege - car – bike-police

ಹೀಗೆ ರಾಜ್ಯಾದ್ಯಂತ ಫೀಲ್ಡ್ ಗಿಳಿದಿರುವ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು ಅನಗತ್ಯವಾಗಿ ರಸ್ತೆಗಿಳಿಯುವವರ ವಿರುದ್ದ ಕ್ರಮ ಕೈಗೊಳ್ಳುತ್ತಿದ್ದಾರೆ.

Key words: Weekend curfew-unnecessarily – Siege – car – bike-police