ಜಿಟಿ ದೇವೇಗೌಡ ಬಿಜೆಪಿ ಬಂದ್ರೆ ಸ್ವಾಗತ ಎಂದ ಡಿಸಿಎಂ ಗೋವಿಂದ ಕಾರಜೋಳ

ಬೆಂಗಳೂರು, ಸೆಪ್ಟೆಂಬರ್ 15, 2019 (www.justkannada.in): ಮಾಜಿ ಸಚಿವ, ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಬಿಜೆಪಿ ಸೇರಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಈ ಕುರಿತು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಟಿ.ದೇವೇಗೌಡರು ಬಿಜೆಪಿಗೆ ಬರುವುದಾದರೆ ಸ್ವಾಗತ. ಬಿಜೆಪಿ ನಿಂತ ನೀರಲ್ಲ. ಹರಿಯುವ ನೀರು, ಹಾಗಾಗಿ ಯಾರೇ ಆಗಲಿ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬರುವವರನ್ನು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

ಅನರ್ಹ ಶಾಸಕರಿಂದ ತೆರವಾದ 17 ಕ್ಷೇತ್ರಗಳಲ್ಲೂ ನಮ್ಮ ತಯಾರಿ ನಡೆಯುತ್ತಿದೆ. ಎಲ್ಲಾ ಕ್ಷೇತ್ರದಲ್ಲೂ ಗೆದ್ದೇ ಗೆಲ್ಲುತ್ತೇವೆ. ಅನರ್ಹ ಶಾಸಕರು ಅಸಮಾಧಾನ ತೋಡಿಕೊಳ್ಳುವ ಪ್ರಶ್ನೆಯೇ ಇಲ್ಲ ಕೋರ್ಟ್ ನಲ್ಲಿ ಕಾನೂನಾತ್ಮಕ ಹೋರಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ.