‘ಚೀನಾ ಪೇ ಚರ್ಚಾ’ ಯಾವಾಗ: ಪ್ರಧಾನಿ ಮೋದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚರ್ಚೆ

ಬೆಂಗಳೂರು, ಡಿಸೆಂಬರ್ 18, 2022 (www.justkannada.in): ಭಾರತ – ಚೀನಾ ನಡುವಿನ ಗಡಿ ಸಂಘರ್ಷದ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಅವಕಾಶ ನೀಡುತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಭಾರತ – ಚೀನಾ ನಡುವಿನ ಗಡಿ ಸಂಘರ್ಷದ ಕುರಿತು ಚರ್ಚಿಸಲು ಮೋದಿ ಸಂಸತ್ತಿನಲ್ಲಿ ಅವಕಾಶ ನೀಡುತ್ತಿಲ್ಲ. ಯಾವಾಗ ‘ಚೀನಾ ಪೇ ಚರ್ಚಾ’ ನಡೆಯಲಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಕೂಡಾ ಈ ಕುರಿತು ದನಿ ಎತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದ ಮೂಲಕ ಉತ್ತರಿಸುವುದು ಕರ್ತವ್ಯವಾಗಿದೆ.  ಸಂಸತ್ತಿನಲ್ಲಿ ಚರ್ಚಿಸಲು ಏಕೆ ನಿರ್ಬಂಧಿಸಲಾಗುತ್ತಿದೆ ಎಂಬುದರ ದೇಶದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಡೋಕ್ಲಾಮ್ನಲ್ಲಿರುವ ಸಿಲಿಗುರಿ ಕಾರಿಡಾರ್ ಸಮೀಪ ಜಂಫೇರಿ ಪರ್ವತದವರೆಗೆ ಚೀನಾದ ಸೇನಾ ಪಡೆಗಳು ತಮ್ಮ ನೆಲೆ ನಿರ್ಮಿಸುತ್ತಿವೆ ಎಂಬ ವಿಷಯ ಈಗ ಆಡಳಿತ ಹಾಗೂ ವಿರೋಧ ಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ.