ಕೊಹ್ಲಿ ಆರ್’ಸಿಬಿ ಕ್ಯಾಪ್ಟನ್’ಶಿಪ್ ನಿಂದ ದೂರ ಸರಿಯುವ ನಿರ್ಧಾರ ಕೈಗೊಳ್ಳಲು ಕಾರಣವೇನು…?

ಬೆಂಗಳೂರು, ಸೆಪ್ಟೆಂಬರ್ 20, 2021 (www.justkannada.in): ವಿರಾಟ್ ಕೊಹ್ಲಿ 2021 ಐಪಿಎಲ್ ಸೀಸನ್ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಸ್ಥಾನಕ್ಕೆ ಗುಡ್ ಬೈ ಹೇಳುವುದಾಗಿ ಘೋಷಿಸಿದ್ದಾರೆ. ಇದಕ್ಕೆ ಕಾರಣವಾದರೂ ಏನು ಎಂಬ ಪ್ರಶ್ನೆ ಮೂಡಿದೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕತ್ವ ತ್ಯಜಿಸಿದ್ದ ಬಳಿಕ ಅಭಿಮಾನಿಗಳಿಗೆ ಮತ್ತೊಂದು ಶಾಕ್ ನೀಡಿದ್ದಾರೆ. ಆರ್‌ಸಿಬಿಯ ನಾಯಕನಾಗಿ ಇದು ನನ್ನ ಕೊನೆಯ ಐಪಿಎಲ್ ಎಂದು ಹೇಳಿದ್ದರು.

ಏಕೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ನನ್ನ ಕೊನೆಯ ಐಪಿಎಲ್ ಪಂದ್ಯವನ್ನು ಆಡುವವರೆಗೂ ನಾನು ಆರ್‌ಸಿಬಿ ಆಟಗಾರನಾಗಿ ಮುಂದುವರಿಯುತ್ತೇನೆ. ನನ್ನನ್ನು ನಂಬಿದ್ದಕ್ಕಾಗಿ ಮತ್ತು ನನ್ನನ್ನು ಬೆಂಬಲಿಸಿದ ಎಲ್ಲ ಆರ್‌ಸಿಬಿ ಅಭಿಮಾನಿಗಳಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಕೊಯ್ಲಿ ಟ್ವೀಟ್ ಮಾಡಿದ್ದರು. ಆದರೆ ಈ ದಿಢೀರ್ ನಿರ್ಧಾರ ಏಕೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.

key words: why kohli decided to quit rcb captaincy