ಬಿಜೆಪಿ ನಾಯಕರ ಮನೆ ಮೇಲೆ ಏಕೆ ಐಟಿ ದಾಳಿ ನಡೆಸುತ್ತಿಲ್ಲ…? – ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ…

ಬೆಂಗಳೂರು,ಅ,10,2019(www.justkannada.in): ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ ನಡೆಸಿರುವುದುನ್ನ ಖಂಡಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ಕೇವಲ ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ ಮಾಡಲಾಗುತ್ತಿದೆ. ಬಿಜೆಪಿ ನಾಯಕರ ಮನೆ ಮೇಲೆ ಏಕೆ ಐಟಿ ದಾಳಿ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇಂದು ಬೆಳ್ಳಂಬೆಳಿಗ್ಗೆಯೇ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ನಿವಾಸ ಮತ್ತು ಶಿಕ್ಷಣ ಸಂಸ್ಥೆಗಳ ಮೇಲೆ ಹಾಗೂ ಕೋಲಾರದಲ್ಲಿ ಆರ್.ಎಲ್ ಜಾಲಪ್ಪ ಅವರ ಶಿಕ್ಷಣ ಸಂಸ್ಥೆಗಳ ಮೇಲೂ ಐಟಿ ದಾಳಿ ನಡೆಸಿದೆ. ಹೀಗಾಗಿ ಕೇವಲ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ದಾಳಿ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಖಂಡಿಸಿದ್ದಾರೆ.

ಕಾಂಗ್ರೆಸ್ ನಾಯಕರನ್ನ ಟಾರ್ಗೆಟ್ ಮಾಡಿ ಐಟಿ ದಾಳಿ ನಡೆಸುತ್ತಿರುವುದು ಸ್ಪಷ್ಟ.  ಚುನಾವಣೆ ಸಂದರ್ಭದಲ್ಲೂ ಈ ರೀತಿ ದಾಳಿ ಮಾಡಲಾಗಿತ್ತು.  ರಾಜಕೀಯ ದುರುದ್ದೇಶದಿಂದ ಐಟಿ ದಾಳಿಯಾಗಿರಬಹುದು. ಇದು ರಾಜಕೀಯ ಪ್ರೇರಿತವಾದದ್ದು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Key words: Why not- IT -attack – BJP leaders’ -Former CM Siddaramaiah