ಚುನಾವಣೆಗೂ ಮುನ್ನ ಯಾವ ಮೈತ್ರಿಕೂಟದ ಜೊತೆ ಕೈಜೋಡಿಸುವುದಿಲ್ಲ: ಬಿಎಸ್ಪಿ ನಾಯಕಿ ಮಾಯಾವತಿ

ಬೆಂಗಳೂರು, ಆಗಸ್ಟ್ 31, 2023 (www.justkannada.in): ಲೋಕಸಭೆ ಚುನಾವಣೆಗೂ ಮುನ್ನ ಯಾವ ಮೈತ್ರಿಕೂಟದ ಜೊತೆ ಕೈಜೋಡಿಸುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಅಥವಾ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟದೊಂದಿಗೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ ಎಂದು ಮಾಯಾವತಿ ತಿಳಿಸಿದ್ದಾರೆ.

ನಾಳೆ ಮುಂಬೈನಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆಯಲಿದೆ. ಇದಕ್ಕೂ ಮುನ್ನ ಮೈತ್ರಿ ಕುರಿತು ಮಾಯಾವತಿ ಸರಣಿ ಟ್ವೀಟ್ ಮಾಡಿದ್ದಾರೆ.

ಮೈತ್ರಿ ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಹಾಗಾಗಿ ನಾನು ಮಾಧ್ಯಮಗಳಿಗೆ ಮನವಿ ಮಾಡುತ್ತೇನೆ. ದಯವಿಟ್ಟು ಯಾವುದೇ ನಕಲಿ ಸುದ್ದಿ ಹರಡಬೇಡಿ ಎಂದು ಮನವಿ ಮಾಡಿದ್ದಾರೆ.

ಲೋಕಸಭೆ ಮತ್ತು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಧ್ಯಮಗಳು ಮತ್ತೆ ಮತ್ತೆ ತಪ್ಪು ಮಾಹಿತಿ ಹರಡಬಾರದು ಎಂದಿದ್ದಾರೆ.