ಉಪಚುನಾವಣೆಯಲ್ಲಿ ಬಿಜೆಪಿ 15 ಸ್ಥಾನ ಗೆದ್ದರೆ ಸಿದ್ದರಾಮಯ್ಯ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ?: ಜಗದೀಶ್ ಶೆಟ್ಟರ್ ಸವಾಲು

ಅಥಣಿ, ಡಿಸೆಂಬರ್ 01, 2019 (www.justkannada.in): ರಾಜ್ಯದಲ್ಲಿ ಬಿಜೆಪಿ ಪಕ್ಷ 15 ಕ್ಷೇತ್ರಗಳಲ್ಲಿ ಗೆದ್ದರೆ ಸಿದ್ದರಾಮಯ್ಯ ಪ್ರತಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ ಎಂದು ಸಚಿವ ಜಗದೀಶ್ ಶೆಟ್ಟರ್ ಬಹಿರಂಗ ಸವಾಲ್ ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲುವ ಭಯದಲ್ಲಿ ಸಿದ್ದರಾಮಯ್ಯ ಭ್ರಮೆಯಲ್ಲಿ ಮಾತನಾಡುತ್ತಿದ್ದಾರೆ. ಅವರು ಈ ಹಿಂದೆ ಏನು ಹೇಳಿದ್ದಾರೆ ಅವುಗಳೆಲ್ಲಾ ಉಲ್ಟಾ ಆಗಿದೆ ಎಂದು ಹೇಳಿದರು.

ಈ ಹಿಂದೆ ಕುಮಾರಸ್ವಾಮಿ ಅವರ ಅಪ್ಪನ ಆಣೆ ಸಿಎಂ ಆಗಲ್ಲ, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದರು. ಆದರೆ ಅವುಗಳು ಯಾವುದೂ ಆಗಿಲ್ಲ ಎಂದು ವಿವರಿಸಿದರು. ಉಪಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದು ಸರ್ಕಾರ ಸುಭದ್ರವಾಗಲಿದೆ ಎಂದು ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.