Friday, October 16, 2026

Dasara Wishes

Happy Dasara
Home Front Page ಬಿಜೆಪಿ ಅಧಿಕಾರಕ್ಕೆ ಬರಲು ಸಹಾಯ ಮಾಡಿದವರ ಕೈ ಬಿಡುವ ಪ್ರಶ್ನೆಯೇ ಇಲ್ಲ: ಸಚಿವ ಆರ್. ಅಶೋಕ್

ಬಿಜೆಪಿ ಅಧಿಕಾರಕ್ಕೆ ಬರಲು ಸಹಾಯ ಮಾಡಿದವರ ಕೈ ಬಿಡುವ ಪ್ರಶ್ನೆಯೇ ಇಲ್ಲ: ಸಚಿವ ಆರ್. ಅಶೋಕ್

ಬೆಂಗಳೂರು, ಸೆಪ್ಟೆಂಬರ್ 22, 2019 (www.justkannada.in): ಬಿಜೆಪಿ ಅಧಿಕಾರಕ್ಕೆ ಬರಲು ಸಹಾಯ ಮಾಡಿದವರನ್ನ ಬಿಡಲು ಸಾಧ್ಯವೇ ಇಲ್ಲ ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರ್ ಆರ್.ಅಶೋಕ್ ಹೇಳಿದ್ದಾರೆ.

ಸೋಮವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇದೆ. ಅದನ್ನ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು  ಜೆ.ಪಿ.ನಡ್ಡ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಆರ್.ಅಶೋಕ್ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಇಂದು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂ ಗೋವಿಂದ ಕಾರಜೋಳ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಇತರರು ಸ್ವಾಗತ ಕೋರಿದ್ದಾರೆ.

ಕೆಂಪೇಗೌಡರ ವೀರಭೂಮಿಗೆ ನಮನಗಳು. ಮುಂದಿನ ದಿನಗಳಲ್ಲಿ ಕರ್ನಾಟಕಕ್ಕೆ ಉತ್ತಮ ಭವಿಷ್ಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ.