‘ವಿಂಡೋಸೀಟ್’ ಟೀಸರ್ ರಿಲೀಸ್ ಗೆ ಶೀತಲ್ ಆ್ಯಡ್ ಟೀಂ ತಯಾರಿ

ಬೆಂಗಳೂರು, ನವೆಂಬರ್ 03, 2020 (www.justkannada.in): ವಿಂಡೋಸೀಟ್ ಸಿನಿಮಾ ಟೀಸರ್ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ.

ಶೀತಲ್ ಶೆಟ್ಟಿ ನಿರ್ದೇಶನದ ವಿಂಡೋಸೀಟ್ ಗೆ ನಿರ್ಮಾಪಕ ಜಾಕ್ ಮಂಜು ಬಂಡವಾಳ ಹೂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ರೊಮ್ಯಾಂಟಿಕ್, ಥ್ರಿಲ್ಲರ್ ಕಥೆ ಹೊಂದಿರುವ ವಿಂಡೋಸೀಟ್ ನಲ್ಲಿ ರಂಗಿತರಂಗ ಖ್ಯಾತಿಯ ನಿರೂಪ್ ಬಂಡಾರಿ ನಾಯಕರಾಗಿದ್ದಾರೆ.

ನಿರೂಪ್ ಗೆ ನಾಯಕಿಯರಾಗಿ ಅಮೃತಾ ಅಯ್ಯಂಗಾರ್ ಮತ್ತು ಸಂಜನಾ ಆನಂದ್ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರವಿಶಂಕರ್, ಮಧುಸೂದನ್ ರಾವ್, ಲೇಖಾ ನಾಯ್ಡು, ಸೂರಜ್ ಚಿತ್ರದ ತಾರಾಬಳಗದಲ್ಲಿದ್ದಾರೆ.