Thursday, August 6, 2026

BDA Apartments

Home Front Page ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕೂ ಸ್ಥಾನಗಳಲ್ಲಿ ಗೆಲುವು – ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ.

ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕೂ ಸ್ಥಾನಗಳಲ್ಲಿ ಗೆಲುವು – ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ.

ಹುಬ್ಬಳ್ಳಿ, ಜೂನ್ 11,2022(www.justkannada.in): ಎಲ್ಲೆಡೆ ಬಿಜೆಪಿ ಪರವಾದ ಪ್ರತಿಕ್ರಿಯೆಯನ್ನು ಗಮನಿಸಿದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕೂ ಸ್ಥಾನ  ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ಬೆಳಗಾವಿ ಹಾಗೂ ಹುಬ್ಬಳ್ಳಿಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ತೆರಳುತ್ತಿದ್ದು, ಇವರೆಗೂ ನಡೆದಿರುವ ಅಭಿಯಾನ ಮತ್ತು ಪ್ರತಿಕ್ರಿಯೆಗಳನ್ನು ಪರಿಗಣಿಸಿದರೆ  ಬಿಜೆಪಿಗೆ ಗೆಲುವು ಖಚಿತ ಎಂಬ ವಿಶ್ವಾಸ ಮೂಡಿರುವುದಾಗಿ  ತಿಳಿಸಿದ್ದಾರೆ.

ಆಸಿಡ್ ದಾಳಿ ಮಾಡುವವರ ಮೇಲೆ ಕಠಿಣ ಕಾನೂನು..

ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಆ್ಯಸಿಡ್ ದಾಳಿ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ಈಗಿರುವ ಕಾನೂನನ್ನು ಇನ್ನಷ್ಟು ಕಠಿಣಗೊಳಿಸಿ ರೂಪಿಸುವಂತೆ ಕಾನೂನು ತಜ್ಞರಿಗೆ ಸೂಚಿಸಲಾಗುವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.border-districts-state-covid-negative-test-outside-states-minister-basavaraja-bommai

ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ದಾಳಿಯಾಗಿರುವುದು ಬಹಳ ದುರದೃಷ್ಟಕರ. ಈಗಿರುವ ಕಾನೂನನ್ನು ಇನ್ನಷ್ಟು ಕಠಿಣಗೊಳಿಸುವ ಚಿಂತನೆ ಇದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು ಎಂದರು.

Key words: Winning -four seats –legislative council- elections-CM Basavaraja Bommai