Sunday, September 20, 2026

BDA Apartments

ಸಂಸತ್ತಿನ ಚಳಿಗಾಲದ ಅಧಿವೇಶನ: ಖರ್ಗೆ ನೇತೃತ್ವದಲ್ಲಿ ಇಂಡಿಯಾ ಕೂಟದ ಮುಖಂಡರ ಸ...
Home Front Page ಸಂಸತ್ತಿನ ಚಳಿಗಾಲದ ಅಧಿವೇಶನ: ಖರ್ಗೆ ನೇತೃತ್ವದಲ್ಲಿ ಇಂಡಿಯಾ ಕೂಟದ ಮುಖಂಡರ ಸಭೆ

ಸಂಸತ್ತಿನ ಚಳಿಗಾಲದ ಅಧಿವೇಶನ: ಖರ್ಗೆ ನೇತೃತ್ವದಲ್ಲಿ ಇಂಡಿಯಾ ಕೂಟದ ಮುಖಂಡರ ಸಭೆ

ಬೆಂಗಳೂರು, ಡಿಸೆಂಬರ್ 04, 2023 (www.justkannada.in): ಇಂಡಿಯಾ ಕೂಟದ ಮುಖಂಡರು ಇಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಭೇಟಿಯಾಗಲಿದ್ದಾರೆ.

ಉಭಯ ಸದನಗಳಲ್ಲಿ ತಮ್ಮ ಕಾರ್ಯತಂತ್ರವನ್ನು ರೂಪಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಚರ್ಚೆ ನಡೆಯಲಿದೆ.

ಮೊದಲ ದಿನವೇ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ಉಚ್ಚಾಟನೆ ಮಾಡುವ ಸಾಧ್ಯತೆ ಇರುವುದರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಬಿರುಸಿನಿಂದ ಆರಂಭವಾಗುವ ಸಾಧ್ಯತೆ ಇದೆ.

ಬಿಜೆಪಿ ಸರ್ಕಾರವನ್ನು ತರಾಟೆಗ ತೆಗೆದುಕೊಳ್ಳಲು ಉಭಯ ಸದನಗಳಲ್ಲಿ ಜಂಟಿ ಕಾರ್ಯತಂತ್ರವನ್ನು ರೂಪಿಸಲು ವಿರೋಧ ಪಕ್ಷದ ನಾಯಕರು ಸಂಸತ್ತಿನ ಅಧಿವೇಶನಗಳಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ.