ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ  ಚಳಿಗಾಲದ ಅಧಿವೇಶನ.

Important decisions of the Cabinet meeting held today under the chairmanship of Chief Minister Siddaramaiah

 

ಬೆಂಗಳೂರು, ನ.೧೩, ೨೦೨೫: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು..

ಸಚಿವ ಸಂಪುಟದ  ಉಪಸಮಿತಿಗಳು ಆರು ತಿಂಗಳ ಅವಧಿ ಮೀರಿ ವರದಿಯನ್ನು ಸಲ್ಲಿಸಿರಲಿಲ್ಲ. ಕೋವಿಡ್ ಸಂದರ್ಭದಲ್ಲಿ ನಡೆದಿರುವ ಖರೀದಿಗಳ ಮೇಲೆ ನ್ಯಾ.  ಮೈಕಲ್ ಡಿ.ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ವಿಚಾರಣಾ ಆಯೋಗದ ಮೇಲೆ ತೆಗೆದುಕೊಳ್ಳಲಾಗುವ ಕ್ರಮಗಳ ಮೇಲೆ ಮೇಲುಸ್ತುವಾರಿ ಮಾಡಲು ಹಾಗೂ ಉನ್ನತ ಮಟ್ಟದ ಸಮಿತಿಯ  ವರದಿಗಳನ್ನು  ಮಾಡಲು ಸೂಕ್ತ ಶಿಫಾರಸ್ಸುಗಳನ್ನು ಮಾಡುವ ಉಪಸಮಿತಿ, ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳ ಆರ್ಥಿಕ  ಸ್ಥಿತಿಗತಿಗಳ ಬಗ್ಗೆ ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ನೇಮಿಸಲಾಗಿರುವ ಸಮಿತಿ, ಬೆಂಗಳೂರು – ಮೈಸೂರು ಮೂಲಸೌಕರ್ಯ ಕಾರಿಡಾರ್ ಅನುಷ್ಠಾನದ  ಕುರಿತು ಈವರೆಗೆ ಆಗಿರುವ ಪ್ರಗತಿ ಹಾಗೂ ಮುಂದೆ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಉಪಸಮಿತಿಗಳು ವರದಿಗಳನ್ನು ಆದಷ್ಟು ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಇದೇ ವೇಳೆ ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ  ಚಳಿಗಾಲದ ಅಧಿವೇಶನ ನಡೆಯುವ ಬಗೆಗೂ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.

key words: winter session, will be held, in Belagavi, from December 8.

SUMMARY:

winter session will be held in Belagavi from December 8.

Important decisions of the Cabinet meeting held today under the chairmanship of Chief Minister Siddaramaiah