ಅನುದಾನ ಹಿಂಪಡೆದಿದ್ದು ಮೇಲ್ನೋಟಕ್ಕೆ ದ್ವೇಷದ ರಾಜಕಾರಣ-ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು,ಅಕ್ಟೋಬರ್,11,2023(www.justkannada.in):  ರಾಜರಾಜೇಶ್ವರಿ ನಗರ ಕ್ಷೇತ್ರದ ಅನುದಾನ ಹಿಂಪಡೆದಿದ್ದು ಮೇಲ್ನೋಟಕ್ಕೆ ದ್ವೇಷದ ರಾಜಕಾರಣವಾಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ಆರ್.ಆರ್ ನಗರ ಕ್ಷೇತ್ರಕ್ಕೆ ಅನುಮೋದಿಸಲಾಗಿದ್ದ ಅನುದಾನ ಕಡಿತ ಮಾಡಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಶಾಸಕ ಮುನಿರತ್ನ ಪ್ರತಿಭಟನೆ ನಡೆಸಿದರು. ನಂತರ ಮಾಜಿ ಸಿಎಂ ಬಿಎಸ್ ವೈ ಮುನಿರತ್ನರನ್ನ ಮನವೊಲಿಸಿದರು.

ಈ ಕುರಿತು ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಜರಾಜೇಶ್ವರಿ ನಗರ ಕ್ಷೇತ್ರದ ಅನುದಾನ ಹಿಂಪಡೆದಿರುವ ಮೇಲ್ನೋಟಕ್ಕೆ ಇದು ದ್ವೇಷದ ರಾಜಕಾರಣ. ಎಲ್ಲಾ ಕ್ಷೇತ್ರಗಳಂತೆ ಆರ್​.ಆರ್.ನಗರ ಕ್ಷೇತ್ರಕ್ಕೂ ಅನುದಾನ ಕೊಡಬೇಕು. ಅನುದಾನ ಬಗ್ಗೆ ಮುಖ್ಯಮಂತ್ರಿ, ಡಿಸಿಎಂ ಜೊತೆ ಮಾತನಾಡುತ್ತೇನೆ. ಎಲ್ಲಾ ಶಾಸಕರಿಗೂ ಅನುದಾನ ನೀಡಬೇಕು ಎಂದು ಹೇಳಿದರು.

Key words: withdrawal – grant – politics -Former CM- BS Yeddyurappa