Tuesday, September 22, 2026

BDA Apartments

24 ಗಂಟೆ ಅವಧಿಯಲ್ಲಿ 9,436 ಮಂದಿಗೆ ಕೋವಿಡ್ ಸೋಂಕು ದೃಢ BDA JK_Adv BDA Adv
Home Front Page 24 ಗಂಟೆ ಅವಧಿಯಲ್ಲಿ 9,436 ಮಂದಿಗೆ ಕೋವಿಡ್ ಸೋಂಕು ದೃಢ

24 ಗಂಟೆ ಅವಧಿಯಲ್ಲಿ 9,436 ಮಂದಿಗೆ ಕೋವಿಡ್ ಸೋಂಕು ದೃಢ

ಬೆಂಗಳೂರು, ಆಗಸ್ಟ್ 28, 2022 (www.justkannada.in): ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ 9,436 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೋವಿಡ್ ಮಹಾಮಾರಿಗೆ ದೇಶದಲ್ಲಿ ಈವರೆಗೆ 5,27,754 ಜನರು ಸಾವನ್ನಪ್ಪಿದ್ದಾರೆ.

ದೇಶದಲ್ಲಿ 86,591 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.62ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಈವರೆಗೆ 4,37,93,787 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 26,53,964 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ದೇಶದಲ್ಲಿ ಈವರೆಗೆ 2,11,66,35,408 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,22,551 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.