ಬೆಂಗಳೂರು, ಜನವರಿ,13,2026 (www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳದ ಮೂಲದ ಸರ್ಬಾನು ಖಾತುನ್ ಬಂಧಿತ ಮಹಿಳೆ. ಬೆಂಗಳೂರಿನ ಹೆಬ್ಬಗೋಡಿ ಠಾಣೆಯ ಪೊಲೀಸರು ಸರ್ಬಾನು ಖಾತುನ್ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಈಕೆ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದಳು.
ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ಮಾಡುವಾಗ ಈ ಘಟನೆ ನಡೆದಿತ್ತು . ಜೆಸಿಬಿ ಬಳಸಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ. ಈ ವೇಳೆ ಮಹಿಳೆ ತೆರಳುತ್ತಿದ್ದಳು. ಈ ಸಮಯಲ್ಲಿ ವಿಡಿಯೋ ಮಾಡುತ್ತಿದ್ದ ಸ್ಥಳೀಯ ವ್ಯಕ್ತಿ, ಆಕೆಯನ್ನು ಮಾತನಾಡಿಸಿ, ಭಾರತ್ ಮಾತಾ ಕೀ ಜೈ ಎನ್ನುತ್ತಾನೆ.
ಜೊತೆಗೆ ಭಾರತ್ ಮಾತಾ ಕೀ ಜೈ ಅಂತ ಹೇಳು ಅಂತ ಹೇಳುತ್ತಾನೆ. ಆಗ ಸಿಟ್ಟಿಗೆದ್ದ ಮಹಿಳೆ ಬಾಂಗ್ಲಾಗೆ ಜೈ ಎನ್ನುತ್ತಾ ಅಲ್ಲಿಂದ ಹೊರಡುತ್ತಾಳೆ. ಈ ವೇಳೆ ಸ್ಥಳೀಯರು ಆಕೆಯ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಈ ಮಹಿಳೆಯನ್ನು ಹೆಬ್ಬಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
key words: Woman, arrested, shouting, anti-national slogans







