ಬೆಂಗಳೂರು, ಜನವರಿ,7,2026 (www.justkannada.in): ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಘಟನೆಗ ಕಾರಣರಾದ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು.
ಈ ಕುರಿತು ಮಾತನಾಡಿದ ಎಂಎಲ್ ಸಿ ಸಿ.ಟಿ ರವಿ, ಕಾಂಗ್ರೆಸ್ ಕಾರ್ಪೋರೇಟರ್ ದೂರಿನ ಮೇಲೆ ಸುಜಾತಾ ಅವರನ್ನು ಬಂಧಿಸಿ ಪೊಲೀಸರು ಅಮಾನವಿಯವಾಗಿ ನಡೆಸಿಕೊಂಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ. ಇದು ಮಹಿಳಾ ದೌರ್ಜನ್ಯ. ಕೂಡಲೇ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು ಎಂದು ಒತ್ತಾಯಿಸಿದರು.
ತಪ್ಪು ಮಾಡಿದ್ದರೆ ಮಹಿಳೆಯ ಮೇಲೆ ಕಾನೂನು ಪ್ರಕಾರ ಶಿಕ್ಷೆಯಾಗಲಿ. ಆದರೆ ಕಾನೂನನ್ನು ರಕ್ಷಣೆ ಮಾಡಬೇಕಾದ ಪೊಲೀಸರೇ ಮಹಿಳೆಯನ್ನು ವಿವಸ್ತ್ರಗೊಳಿಸಿ ರಾಕ್ಷಸರಂತೆ ವರ್ತಿಸಿರುವುದು ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಗ ಘಟನೆಯಾಗಿದೆ ಎಂದು ಸಿ.ಟಿ ರವಿ ಅಸಮಾಧಾನ ವ್ಯಕ್ತಪಡಿಸಿದರು.
Key words: Woman, assaulted, police, CT Ravi, demands, legal action







