Thursday, August 13, 2026

BDA Apartments

Home Crime ರಸ್ತೆ ಬದಿ ನಿಂತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವು

ರಸ್ತೆ ಬದಿ ನಿಂತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವು

ಬೆಂಗಳೂರು, ಅಕ್ಟೋಬರ್, 7,2024 (www.justkannada.in):  ರಸ್ತೆ ಬದಿ ನಿಂತಿದ್ದ ಮಹಿಳೆ ಮೇಲೆ ವಿದ್ಯುತ್​ ತಂತಿ ತುಂಡಾಗಿ ಬಿದ್ದು  ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ(50) ಮೃತಪಟ್ಟವರು.  ಮಂಜಮ್ಮ ಮನೆ ಬಳಿ ನಿಂತಿದ್ದ ವೇಳೆ  ಏಕಾಏಕಿ ವಿದ್ಯುತ್ ತಂತಿ ತುಂಡಾಗಿ  ಬಿದ್ದು ಈ ದುರ್ಘಟನೆ ನಡೆದಿದೆ.

ಮಂಜಮ್ಮ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ  ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: woman, died, after, electric wire