ಬಣ್ಣ ಬೆರೆಸುವ ಪೇಂಟ್ ಮಿಕ್ಸರ್ ​ಗೆ ಸಿಲುಕಿ ಮಹಿಳೆ ಸಾವು.

ಬೆಂಗಳೂರು,ನವೆಂಬರ್,9,2023(www.justkannada.in): ಬಣ್ಣ ಬೆರೆಸುವ ಪೇಂಟ್ ಮಿಕ್ಸರ್​ ಗೆ ಸಿಲುಕಿ ಕೂದಲು ಸಿಲುಕಿ ಮಹಿಳೆಯ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಈ ದುರ್ಘಟನೆ  ನಡೆದಿದೆ. 33 ವರ್ಷದ ಶ್ವೇತಾ ಮೃತಪಟ್ಟ ಮಹಿಳೆ. ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಶ್ವೇತಾ ಕೆಲಸ ಮಾಡುತ್ತಿದ್ದರು.

ಈ ನಡುವೆ ಬಣ್ಣ ಗಟ್ಟಿಯಾಗುತ್ತಿದ್ದರಿಂದ ಚೆಕ್ ಮಾಡಲು ಗ್ರೈಂಡರ್​ ಒಳಗೆ ಮಹಿಳೆ ಶ್ವೇತಾ ಬಗ್ಗಿದಾಗ ಜಡೆ ಗ್ರೇಡರ್ ಗೆ ಸಿಲುಕಿದೆ. ಜಡೆ ಸಿಲುಕಿದಾಗ ಮಹಿಳೆ ಕೂಗಿಕೊಂಡರೂ ಸಹ ಗ್ರೈಂಡರ್ ಸೌಂಡ್ ಗೆ ಯಾರಿಗೂ ಕೇಳಿಸಿಲ್ಲ. ಮಹಿಳೆ ಗ್ರೈಂಡರ್ ​ಗೆ ಸಿಲುಕಿ ಮೃತಪಟ್ಟ ಬಳಿಕ ಉಳಿದ ಕೆಲಸಗಾರರು ಬಂದು ನೋಡಿದ್ದು,  ಈ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: woman-died –after- falling – paint mixer.