Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Cinema ಕಾರು ಅಪಘಾತದಲ್ಲಿ ಮಹಿಳೆ ಸಾವು: ನಟ ನಾಗಭೂಷಣ್ ವಿರುದ್ಧ ಪ್ರಕರಣ

ಕಾರು ಅಪಘಾತದಲ್ಲಿ ಮಹಿಳೆ ಸಾವು: ನಟ ನಾಗಭೂಷಣ್ ವಿರುದ್ಧ ಪ್ರಕರಣ

ಬೆಂಗಳೂರು, ಅಕ್ಟೋಬರ್ 01, 2023 (www.justkannada.in): ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಿಸಿ ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

ಕಳೆದ ರಾತ್ರಿ ಬೆಂಗಳೂರಿನಲ್ಲಿ ನಟ ನಾಗಭೂಷಣ್ ಕಾರು ಕನಕಪುರ ರಸ್ತೆಯ ವಸಂತಪುರ ರಸ್ತೆಯ ಅಪಾರ್ಟ್ ಮೆಂಟ್ ಬಳಿ ಆಪಘಾತವಾಗಿದೆ.

ಈ ಘಟನೆಯಲ್ಲಿ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ 48 ವರ್ಷದ ಪ್ರೇಮಾ ಎಂಬ ಮಹಿಳೆ ಮೃತಪಟ್ಟರೆ, ಅವರ ಪತಿ ಗಂಭೀರ ಗಾಯಗೊಂಡಿದ್ದಾರೆ.

ಖಾಸಗಿ ವಾಹಿನಿಯ ಕಾರ್ಯಕ್ರಮ ಮುಗಿಸಿ ಬರುವ ವೇಳೆ ನಾಗಭೂಷಣ ಅವರು ಕಾರು ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ನಾಗಭೂಷಣ ಅವರು ಆಸ್ಪತ್ರೆಗೆ ಸೇರಿಸಿದ್ದಾರೆ ಎನ್ನಲಾಗಿದೆ.

ಉತ್ತರ ಹಳ್ಳಿಯ ಕೆ ಎಸ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮುಂದಿನ ತನಿಖೆ ನಡೆಯುತ್ತಿದೆ.