ಕರೆಂಟ್ ಶಾಕ್  ಹೊಡೆದು ಮಹಿಳೆ ಬಲಿ: 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಜಮೀರ್

ಬೆಂಗಳೂರು,ಮಾರ್ಚ್,13,2025 (www.justkannada.in): ನೀರು ಹಿಡಿಯುವ ವೇಳೆ  ಕರೆಂಟ್ ಶಾಕ್ ಹೊಡೆದು ಮಹಿಳೆ ದಾರುಣ  ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ನಡೆದಿದೆ.

ಸೆಲ್ವಿ ಮೃತಪಟ್ಟ ಮಹಿಳೆ. ಇಲ್ಲಿರುವ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್‌ ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನೀಡಲಾಗಿದೆ. ಮೋಟರ್ ಸ್ಟಾರ್ಟ್ ಮಾಡುವಾಗ ಕರೆಂಟ್ ತಗುಲಿ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ಬೆನ್ನಲ್ಲೆ ಮೈಸೂರು ರಸ್ತೆ ಎರಡೂ ಕಡೆ ಸಂಪೂರ್ಣ ಬಂದ್ ಆಗಿದ್ದು, ನ್ಯಾಯ ಬೇಕು ಎಂದು ಘೋಷಣೆ ಕೂಗಿ  ಸ್ಥಳೀಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹಾಗೆಯೇ ಸಚಿವ ಜಮೀರ್ ಅಹ್ಮದ್ ಖಾನ್ ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಿದರು.

ಸ್ಥಳಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿದ್ದು ಈ ಮಧ್ಯೆ ಮೃತ ಮಹಿಳೆ ಸೆಲ್ವಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಿಸಿದ್ದಾರೆ ಎನ್ನಲಾಗಿದೆ.

Key words: Woman, dies, electric shock, Bangalore