Sunday, August 23, 2026

BDA Apartments

Home Election 2024 ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ಮಹಿಳೆ: ಡಿಸಿಎಂ ಡಿಕೆ ಶಿವಕುಮಾರ್ ಸಂತಸ.

ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ಮಹಿಳೆ: ಡಿಸಿಎಂ ಡಿಕೆ ಶಿವಕುಮಾರ್ ಸಂತಸ.

ಬೆಂಗಳೂರು, ಏಪ್ರಿಲ್, 10,2024(www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಕೂಡಿಟ್ಟು ಮಹಿಳೆಯೊಬ್ಬರು ಯುಗಾದಿ ಹಬ್ಬಕ್ಕೆ ಫ್ರಿಡ್ಜ್ ಖರೀದಿಸಿದ್ದು, ಈ ಕುರಿತು ಟ್ವಿಟ್ಟರ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.

 ಗೃಹಿಣಿ ಫ್ರಿಡ್ಜ್ ಖರೀದಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಡಿಕೆ ಶಿವಕುಮಾರ್ ಬಡವರ ಬದುಕಿನ ಗುಣಮಟ್ಟ ಹೆಚ್ಚಿಸಿದ ಸಾರ್ಥಕತೆ ಸಾಕು ನಮಗೆ ಎಂದು ಬರೆದುಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ‘ಹಾವೇರಿಯ ಮಹಿಳೆಯೊಬ್ಬರು ಗೃಹಲಕ್ಷ್ಮಿ ಗ್ಯಾರಂಟಿಯ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ಸುದ್ದಿ ತಿಳಿದು ಮನಸ್ಸಿನಲ್ಲಿ ಒಂದು ಸಾರ್ಥಕತೆಯ ಭಾವ ಮೂಡಿದೆ. ರಾಜಕೀಯ ಮಾಡಲೆಂದೇ ಎಷ್ಟೋ‌ ಜನ ಕಾಂಗ್ರೆಸ್ ಗ್ಯಾರಂಟಿಗಳ‌ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದರು. ನಾವು ಬಡವರ ಮೇಲೆ ರಾಜಕೀಯ ಮಾಡಲ್ಲ, ಬಡವರ ಬದುಕು ಕಟ್ಟುವ ಕೆಲಸ ಮಾಡುತ್ತಿದ್ದೇವೆ. ಅವರ ಬದುಕಿನ ಗುಣಮಟ್ಟ ಹೆಚ್ಚಿಸಿದ ಸಾರ್ಥಕತೆ ಸಾಕು ನಮಗೆ’ ಎಂದು ಡಿಕೆ ಶಿವಕುಮಾರ್  ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಉಚಿತ ಗ್ಯಾರಂಟಿ ಯೋಜನೆಯಡಿ ಪ್ರತಿ ತಿಂಗಳು ಬರುವ 2000 ರೂ. ಹಣವನ್ನು ಕೂಡಿಟ್ಟು ಹಾವೇರಿ ಜಿಲ್ಲೆಯ ಶಿಗ್ಗಾಂವಿ ನಿವಾಸಿ ಲತಾ ಎಂಬವರು ಫ್ರಿಡ್ಜ್ ಖರೀದಿಸಿದ್ದಾರೆ

Key words: woman, fridge, DCM, DK Shivakumar