ಬೆಂಗಳೂರು, ಅಕ್ಟೋಬರ್,10,2025 (www.justkannada.in): ತನ್ನ ಇಬ್ಬರು ಮಕ್ಕಳನ್ನ ಕೊಂದು ತಾಯಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಬೆಂಗಳೂರಿನಲ್ಲಿ ನಡೆದಿದೆ.
ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ (27) ಎಂಬುವವರೇ ತನ್ನ ಮಗಳು ಬೃಂದಾ (4) ಹಾಗೂ ಒಂದೂವರೆ ವರ್ಷದ ಮಗ ಭುವನ್ ನನ್ನು ಕೊಂದು ಆತಹತ್ಯೆ ಮಾಡಿಕೊಂಡ ಮಹಿಳೆ. ವಿಜಯಲಕ್ಷ್ಮೀ ಭುವನೇಶ್ವರಿ ನಗರದ 8ನೇ ಮುಖ್ಯ ರಸ್ತೆ, 4ನೇ ಅಡ್ಡ ರಸ್ತೆಯ ಮನೆಯೊಂದರಲ್ಲಿ ವಾಸವಾಗಿದ್ದರು.
ರಾಯಚೂರು ಜಿಲ್ಲೆ ಮಸ್ಕಿಯ ರಮೇಶ್ ಜೊತೆ ವಿವಾಹವಾಗಿದ್ದ ವಿಜಯಲಕ್ಷ್ಮಿ ಭುವನೇಶ್ವರಿ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ರಮೇಶ್ ಅವರು ಮಾಲ್ವೊಂದರಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದು, ಕೆಲಸದ ನಿಮಿತ್ತ ಊರಿಗೆ ಹೋಗಿದ್ದರು. ಈ ನಡುವೆ ವಿಜಯಲಕ್ಷ್ಮಿ ಅವರು ಇಬ್ಬರು ಮಕ್ಕಳಿಗೆ ವೇಲ್ ನಿಂದ ಕುತ್ತಿಗೆ ಬಿಗಿದು ನೇಣುಹಾಕಿ ಕೊಂದು ನಂತರ ಸೀರೆಯಿಂದ ತಾನೂ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಸುದ್ದಿ ತಿಳಿದು ಬಾಗಲಗುಂಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.
Key words: woman, killed, two children, committed, suicide