Monday, September 14, 2026

BDA Apartments

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು BDA JK_Adv BDA Adv
Home Crime ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

ಮೈಸೂರು,ನವೆಂಬರ್,07,2020(www.justkannada.in) : ಜಿಲ್ಲೆ ನಂಜನಗೂಡು ತಾಲೂಕಿನ ಉಸ್ಕೂರು ಗ್ರಾಮದಲ್ಲಿ ಜಮೀನಿಗೆ ನೀರು ಹಾಯಿಸಲು ಹೋಗಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ್ದಾರೆ.jk-logo-justkannada-logoಉಸ್ಕೂರು ಗ್ರಾಮದ ಗೌರಮ್ಮ(54) ಮೃತ ದುರ್ದೈವಿಯಾಗಿದ್ದು, ತಡರಾತ್ರಿ ಜಮೀನಿಗೆ ನೀರು ಹಾಯಿಸಲು ಹೋದ ವೇಳೆ ಈ ಘಟನೆ ಜರುಗಿದೆ. ಘಟನೆಯ ನಂತರ ಗ್ರಾಮಸ್ಥರು ಚೆಸ್ಕಾಂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಮೃತ ಮಹಿಳೆ ಕುಟುಂಬಕ್ಕೆ ಪರಿಹಾರ ನೀಡಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ

ತಂತಿಗಳು ತುಂಡರಿಸುವ ಸ್ಥಿತಿಯಲ್ಲಿದ್ದಾಗ ಗ್ರಾಮಸ್ಥರು ಚೆಸ್ಕಾಂ ಅಧಿಕಾರಿಗಳಿಗೆ ತಂತಿಗಳನ್ನು ಬದಲಾಯಿಸುವಂತೆ ಮನವಿ ಮಾಡಿದ್ದರು. ಆದರೆ, ಈ ಬಗ್ಗೆ ಕ್ರಮ ಕೈಗೊಳ್ಳದ ಚೆಸ್ಕಾಂ ಅಧಿಕಾರಿಗಳು ಮೃತ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡಬೇಕು ಜೊತೆಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.  ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.Woman-dies-after-being-struck-electric-wire

key words : Woman-dies-after-being-struck-electric-wire