ಇಂದಿನಿಂದ ಮಹಿಳಾ ಪ್ರೀಮಿಯರ್ ಲೀಗ್: ಮುಂಬೈ ಇಂಡಿಯನ್ಸ್- ಗುಜರಾತ್ ಜೈಂಟ್ಸ್ ಮುಖಾಮುಖಿ

ಮಹಿಳಾ ಪ್ರೀಮಿಯರ್ ಲೀಗ್‌ನ ಚೊಚ್ಚಲ ಆವೃತ್ತಿಗೆ ಶನಿವಾರ (ಇಂದು) ಚಾಲನೆ ದೊರೆಯಲಿದೆ.

ಇಂದು ನಡೆಯುವ ಮೊದಲನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ಮುಖಾಮುಖಿಯಾಗಲಿವೆ.

ನಾಳೆ (ಭಾನುವಾರ) ಎರಡು ಪಂದ್ಯ ನಡೆಯಲಿದ್ದು ಮೊದಲನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣೆಸಲಿದೆ.

ಸ್ಮೃತಿ ಮಂದಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಮ್ಮ ಮೊದಲನೇ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಮೊದಲ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ಆಟಗಾರ್ತಿಯರು ಸಕಲ ಸಿದ್ಧತೆ ನಡೆಸಿದ್ದು, ಪರಸ್ಪರ ಮುಖಾಮುಖಿಯಾಗಲು ಸಜ್ಜಾಗಿದ್ದಾರೆ.