ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೇ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ-ಯತೀಂದ್ರ ಸಿದ್ದರಾಮಯ್ಯ.

ಹಾಸನ, ಜನವರಿ 17,2024(www.justkannada.in):  ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು  ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆ ತಡೆ ಇಲ್ಲದೆ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ. ಹಾಗಾಗಿ ನೀವೆಲ್ಲರೂ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು ಎಂದು ತಿಳೀಸಿದರು.

ಚುನಾವಣೆಗೂ ಮೊದಲು 5 ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಅವುಗಳನ್ನು ಜಾರಿಗೊಳಿಸಲಾಗಿದೆ. ಬಡವರು, ಶೋಷತರಿಗಾಗಿ ಕೆಲಸ ಮಾಡುವ ಹಂಬಲ ಕಾಂಗ್ರೆಸ್​ಗೆ ಇದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

Key words:  won – Lok Sabha -elections Siddaramaiah – full-time CM-Yathindra Siddaramaiah.