ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಜನರ ಮಧ್ಯೆ ಕೆಲಸ ಮಾಡಿ- ಕಾರ್ಯಕರ್ತರು, ಮುಖಂಡರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಕರೆ…

ಬೆಂಗಳೂರು, ಜು.16,2020(www.justkannada.in): ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಜನರ ಮಧ್ಯೆ ಕೆಲಸ ಮಾಡಿ ಎಂದು ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಕರೆ ನೀಡಿದ್ದಾರೆ.jk-logo-justkannada-logo

ಈ ಕುರಿತು ಪಕ್ಷದ ನಾಯಕರು ಮತ್ತು ಮುಖಂಡರು, ಕಾರ್ಯಕರ್ತರಿಗೆ ಪತ್ರ ಬರೆದಿರುವ  ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ತಮ್ಮ ಕ್ಷೇತ್ರದಲ್ಲಿ ನಿರಂತರ ಜನಸಂಪರ್ಕವನ್ನು ಕಾಯ್ದುಕೊಂಡು ಬರಬೇಕು. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಟ್ಟಿಗಾದರೂ ಕ್ರಿಯಾಶೀಲರಾಗಿರಬೇಕು ಎಂದು ಸಲಹೆ ನೀಡಿದ್ದಾರೆ.

ಲಾಕ್‌ಡೌನ್ ಇರುವುದರಿಂದ ಜನರನ್ನೂ‌ ಸೇರಿಸಿ ಕಾರ್ಯಕ್ರಮವನ್ನು ಮಾಡಲಾಗದಿದ್ದರೂ ಸಾಮಾಜಿಕ ಜಾಲತಾಣಗಳ ಮೂಲಕ ನಿಮ್ಮ ಅಸ್ತಿತ್ವ ಮತ್ತು ಕ್ರಿಯಾಶೀಲತೆಯನ್ನು, ಪಕ್ಷದ ಕಾರ್ಯಕರ್ತರಿಗೆ ಮತ್ತು ತನ್ಮೂಲಕ ನಿಮ್ಮ ಕ್ಷೇತ್ರದ ಮತದಾರರಿಗೆ ತಲುಪಿಸುವ ಕಾರ್ಯಕ್ಕೆ ನೀವು ಮುಂದಾಗಬೇಕು ಎಂದು  ಕಾರ್ಯಕರ್ತರಿಗೆ ಹೆಚ್.ಡಿ ದೇವೇಗೌಡರು ಸೂಚನೆ ನೀಡಿದ್ದಾರೆ.work-people-keep-party-former-prime-minister-hd-deve-gowda-jds-worker

ಹಾಗೆಯೇ ಕೊರೊನಾ ಪರಿಸ್ಥಿತಿ ಮತ್ತಷ್ಟು ತಿಂಗಳು ಮುಂದುವರಿಯುತ್ತದೋ ಗೊತ್ತಿಲ್ಲ. ಹಾಗೆಂದು ನಾವು ನೀವು ಕೈಕಟ್ಟಿಕೊಂಡು ಕುಳಿತುಕೊಳ್ಳಲು ಸಾಧ್ಯವಿಲ್ಲ. ಕೊರೊನಾ  ವಿಚಾರದಲ್ಲಿ ಸರ್ಕಾರಿ ಕಾರ್ಯಕ್ರಮಗಳು ಒಂದು ಕಡೆಯಾದರೆ, ಪಕ್ಷದ ವತಿಯಿಂದ ಮತ್ತು ವೈಯಕ್ತಿಕವಾಗಿ ನೀವು ಈ ಸಂದರ್ಭದಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತೀರಿ ಎಂಬ ಭಾವನೆ ಮೂಡುವಂತೆ ನಿಮ್ಮ ನಿಮ್ಮ ಕ್ಷೇತ್ರಕ್ಕೆ ಹೊಂದಿಕೆಯಾಗುವಂತಹ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು  ಎಂದು ಹೆಚ್.ಡಿಡಿ ತಮ್ಮ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

Key words: Work – people – keep – party -Former Prime Minister- HD Deve Gowda – jds worker