Sunday, November 8, 2026

Dasara Wishes

Happy Dasara
Home Front Page ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ವಿಶ್ವಕಪ್ ಕ್ರಿಕೆಟ್ ಫೈನಲ್ ನೇರಪ್ರಸಾರ

ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ವಿಶ್ವಕಪ್ ಕ್ರಿಕೆಟ್ ಫೈನಲ್ ನೇರಪ್ರಸಾರ

ಮೈಸೂರು, ನವೆಂಬರ್ 19, 2023 (www.justkannada.in): ಇಂದು ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯ ವೀಕ್ಷಣೆಗೆ ರಾಜ್ಯ ಸರಕಾರ ವಿಶೇಷ ಅವಕಾಶ ಮಾಡಿಕೊಟ್ಟಿದೆ.

ಹೌದು. ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯ ನೇರಪ್ರಸಾರ ಮಾಡಲು ಆದೇಶಿಸಿ ಸರಕಾರ ಸುತ್ತೋಲೆ ಹೊರಡಿಸಿದೆ.

ಇಂದು ಮಧ್ಯಾಹ್ನ 2 ಗಂಟೆಗೆ  ನಡೆಯಲಿರುವ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯ ಉಚಿತ ನೇರ ಪ್ರಸಾರವನ್ನು ಉತ್ತಮವಾದ ಎಲ್ ಸಿ ಡಿ ಪರದೆ ಮತ್ತು ಸೌಂಡ್ ಸಿಸ್ಟಮ್ ನೊಂದಿಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ಕ್ರಿಕೆಟ್ ಪಂದ್ಯಾವಳಿಯ ವೀಕ್ಷಣೆಗೆ ಕ್ರೀಡಾಪಟುಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.