ವಿಶ್ವಕಪ್ ಕ್ರಿಕೆಟ್: ಸೆಮೀಸ್’ನಲ್ಲಿ ಟೀಂ ಇಂಡಿಯಾ ಎದುರಾಳಿ ಕಿವೀಸ್ ಫಿಕ್ಸ್ !

ಬೆಂಗಳೂರು, ನವೆಂಬರ್ 10, 2023 (www.justkannada.in): ಏಕದಿನ ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಆತಿಥೇಯ ಭಾರತ ತಂಡವನ್ನು ಎದುರಿಸುವುದು ಬಹುತೇಕ ಖಚಿತವಾಗಿದೆ.

ಬೆಂಗಳೂರಿನಲ್ಲಿ ನಿನ್ನೆ ನಡೆದ ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿದ ನ್ಯೂಜಿಲೆಂಡ್ ತಂಡವು ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

ಅಂದಹಾಗೆ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಎದುರಿಸುವ ನಿರೀಕ್ಷೆಯ ಬಗ್ಗೆ ಉತ್ಸುಕರಾಗಿದ್ದೇವೆ ಎಂದು ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಹೇಳಿದ್ದಾರೆ.

ಜತೆಗೆ ಈ ಬಾರಿ ನ್ಯೂಜಿಲೆಂಡ್ ವಿರುದ್ಧ ಗೆಲ್ಲುವ ಮೂಲಕ 2019ರ ವಿಶ್ವಕಪ್‌ನ ಸೆಮಿಫೈನಲ್‌ನ ಸೋಲಿಗೆ ಭಾರತ ತಂಡ ಪ್ರತೀಕಾರ ತೀರಿಸಿಕೊಳ್ಳುವ ತವಕದಲ್ಲಿದೆ.