ಪಠ್ಯಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಸಾಹಿತಿ ಬರಗೂರು ರಾಮಚಂದ್ರಪ್ಪ.

ಬೆಂಗಳೂರು,ಜೂನ್,7,2023(www.justkannada.in):  ಮತ್ತೆ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ  ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಈ ಸಂಬಂಧ ನಿನ್ನೆ ನಡೆದ ಸಭೆಯಲ್ಲಿ ಬರಗೂರು ರಾಮಚಂದ್ರಪ್ಪ ಅವರ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದ್ದರು.

ಆದರೆ   ಪಠ್ಯಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನವನ್ನ ಸಾಹಿತಿ ಬರಗೂರು ರಾಮಚಂದ್ರಪ್ಪ ತಿರಸ್ಕರಿಸಿದ್ದಾರೆ.  ಶಾಲಾ ಪಠ್ಯ ಪರಿಷ್ಕರಣೆ ಗೊಂದಲ ನಿವಾರಣೆಗೆ ಸಮಿತಿ ರಚನೆ ಮಾಡುವಂತೆ   ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು.  ಆದರೆ ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು ಪಠ್ಯ ಪರಿಷ್ಕರಣೆಯಿಂದ ಹಿಂದೆ ಸರಿದಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು,  ನಾನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷನಾಗಿಲ್ಲ. ಪಠ್ಯ ಪರಿಷ್ಕರಣೆಗೆ ಹೊಸ ಸಮಿತಿ ರಚನೆ ಆಗಿಲ್ಲ. ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷನಾಗಲು ನಾನು ಒಪ್ಪಿಲ್ಲ ಎಂದು ಹೇಳಿದ್ದಾರೆ.

Key words:  writer-Baraguru Ramachandrappa -rejected – position – Chairman – Text Revision Committee.