ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರ ಅಸ್ಥಿ ವಿಸರ್ಜನೆ.

ಮಂಡ್ಯ,ಸೆಪ್ಟಂಬರ್,27,2025 (www.justkannada.in):  ಕಾವೇರಿ ನದಿಯಲ್ಲಿ ಇಂದು  ಸಾಹಿತಿ, ಕಾದಂಬರಿಗಾರ ಎಸ್. ಎಲ್ ಭೈರಪ್ಪ ಅವರ ಅಸ್ಥಿ ವಿಸರ್ಜನೆ ಮಾಡಲಾಯಿತು.

ಶ್ರೀರಂಗಪಟ್ಟಣದ ರಂಗನಾಥ ಸ್ನಾನ ಘಟ್ಟದಲ್ಲಿ ಎಸ್ ಎಲ್ ಭೈರಪ್ಪ ಅವರ ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅಸ್ಥಿ ವಿಸರ್ಜಿಸಿದರು. ನಿನ್ನೆ  ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ  ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿಸಲಾಗಿತ್ತು.

ಅನಾರೋಗ್ಯದಿಂದ ಬಳಲುತಿದ್ದ ಸಾಹಿತಿ ಎಸ್ ಎಲ್ ಭೈರಪ್ಪ ಸೆಪ್ಟೆಂಬರ್ 24, 2025ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು.

Key words: writer S.L. Bhyrappa, ashes, Caveri river