ರವೀಂದ್ರ ಕಲಾಕ್ಷೇತ್ರದಲ್ಲಿ ಸಾಹಿತಿ ಎಸ್ ಎಲ್ ಭೈರಪ್ಪ ಅಂತಿಮ ದರ್ಶನ: ನಾಳೆ ಮೈಸೂರಿನಲ್ಲಿ ಅಂತ್ಯಕ್ರಿಯೆ

ಬೆಂಗಳೂರು,ಸೆಪ್ಟಂಬರ್,25,2025 (www.justkannada.in):  ನಿನ್ನೆ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದ ಹಿರಿಯ  ಸಾಹಿತಿ ಎಸ್.ಎಲ್ ಭೈರಪ್ಪ ಅವರ ಪಾರ್ಥೀವ ಶರೀರವನ್ನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿದೆ.

ಆಸ್ಪತ್ರೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರಕ್ಕೆ ಸಾರ್ವಜನಿಕ ದರ್ಶನಕ್ಕೆ ಎಸ್‌ಎಲ್ ಭೈರಪ್ಪ ಪಾರ್ಥಿವ ಶರೀರ ಸ್ಥಳಾಂತರಿಸಲಾಗಿದ್ದು. ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಸ್‌ಎಲ್ ಭೈರಪ್ಪ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಡಿನ ಹಲವು ಗಣ್ಯರು ಎಸ್ ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.

ಬಳಿಕ ಮಧ್ಯಾಹ್ನ 2 ಗಂಟೆಯ ನಂತರ ಪಾರ್ಥೀವ ಶರೀರವನ್ನ ಮೈಸೂರಿಗೆ ಶಿಫ್ಟ್ ಮಾಡಲಿದ್ದು ಸಂಜೆ 6 ಗಂಟೆವರೆಗೆ ಮೈಸೂರಿನ ಕಲಾಮಂದಿರ ಮುಂಭಾಗ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words:  writer, SL Bhyrappa, Funeral, tomorrow , Mysore