ಬೆಂಗಳೂರು, ಸೆಪ್ಟಂಬರ್, 24,2025 (www.justkannada.in): ಹೃದಯಾಘಾತದಿಂದ ಇಂದು ನಿಧನರಾದ ನಾಡಿನ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಪದ್ಮಭೂಷಣ ಪುರಸ್ಕೃತರು, ಹಿರಿಯ ಸಾಹಿತಿ ಡಾ.ಎಸ್‌ಎಲ್ ಭೈರಪ್ಪ ಅವರು ಇಂದು ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ಪ್ರಕಟಿಸಿದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶಿಸಿದೆ.
ಎಸ್ ಎಲ್ ಭೈರಪ್ಪ ಅವರ ಪಾರ್ಥೀವ ಶರೀರವನ್ನ ನಾಳೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಮತ್ತು ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಶುಕ್ರವಾರ ಅಂತ್ಯಕ್ರಿಯೆ ನೆರವೇರಲಿದೆ.
Key words: Writter, SL Bhairappa, funeral, government honors