ಚೀನಾದಲ್ಲಿ ಮೂರನೇ ಅವಧಿಗೆ ಅಧಿಕಾರದ ಗದ್ದುಗೆ ಏರಿದ ಕ್ಸಿ ಜಿನ್ಪಿಂಗ್

ಬೆಂಗಳೂರು, ಅಕ್ಟೋಬರ್ 23, 2022 (www.justkannada.in): ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇಂದು ಮೂರನೇ ಅವಧಿಗೆ ಅಧಿಕಾರವನ್ನು ಪಡೆದು ಐತಿಹಾಸಿಕ ಮೈಲಿಗಲ್ಲು ಬರೆದಿದ್ದಾರೆ.

ಕ್ಸಿ ಜಿನ್‌ಪಿಂಗ್ ಮತ್ತೆ ಆಡಳಿತ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಆಗಿದ್ದಾರೆ. ಸಂಸ್ಥಾಪಕ ಮಾವೋ ಝೆಡಾಂಗ್ ನಂತರ ರಾಷ್ಟ್ರದ ಅತ್ಯಂತ ಪ್ರಭಾವಶಾಲಿ ನಾಯಕರಾಗಿದ್ದಾರೆ.

ಕ್ಸಿ ಜಿನ್‌ಪಿಂಗ್ ಅವರು ರೆಕಾರ್ಡ್-ಬ್ರೇಕಿಂಗ್ ಮೂರನೇ ಅವಧಿಗೆ ತಮ್ಮ ಮುಖ್ಯ ಪೋಷಕ ತಂಡವನ್ನು ಅನಾವರಣಗೊಳಿಸಿದ್ದಾರೆ.

ನಮ್ಮ ಮೇಲೆ ಇಟ್ಟಿರುವ ನಂಬಿಕೆಗಾಗಿ ನಾನು ಇಡೀ ಪಕ್ಷಕ್ಕೆ ಪ್ರಾಮಾಣಿಕವಾಗಿ ಧನ್ಯವಾದ ಹೇಳಲು ಬಯಸುತ್ತೇನೆ. ನಮ್ಮ ಪಕ್ಷ ಮತ್ತು ನಮ್ಮ ಜನರ ದೊಡ್ಡ ನಂಬಿಕೆಗೆ ಅರ್ಹರೆಂದು ಸಾಬೀತುಪಡಿಸಲು ಶ್ರದ್ಧೆಯಿಂದ ಕೆಲಸ ಮಾಡಲಿದೆ ಎಂದು ಕ್ಸಿ ಜಿನ್‌ಪಿಂಗ್ ಭರವಸೆ ನೀಡಿದ್ದಾರೆ.