ಕೊಪ್ಪಳ,ಅಕ್ಟೋಬರ್,3,2025 (www.justkannada.in): 2015ರಲ್ಲಿ ನಡೆದಿದ್ದ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೊಪ್ಪಳದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳ ಕೊರತೆಯಿಂದ ಎಲ್ಲಾ 9 ಆರೋಪಿಗಳನ್ನು ಖುಲಾಸೆಗೊಳಿಸಿ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಹತ್ತು ವರ್ಷಗಳ ಹಿಂದೆ ಜನವರಿ.11, 2015ರಂದು ಕೊಪ್ಪಳದ ಕನಕಗಿರಿ ತಾಲ್ಲೂಕಿನ ಕನಕಾಪುರ ಗ್ರಾಮದ ವಿದ್ಯಾರ್ಥಿಯಾಗಿದ್ದ ಯಲ್ಲಾಲಿಂಗ ಕೊಲೆಯಾಗಿದ್ದನು. ಯಲ್ಲಾಲಿಂಗನನ್ನು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಕೊಲೆ ಮಾಡಲಾಗಿತ್ತು. ಪ್ರಕರಣ ಇಡೀ ದೇಶದಲ್ಲೇ ಬಹುದೊಡ್ಡ ಸದ್ದು ಮಾಡಿತ್ತು. ಇದೀಗ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸಿದ್ದು ಸಾಕ್ಷಾಧಾರಗಳ ಕೊರತೆಯಿಂದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿದೆ.
ಯಲ್ಲಾಲಿಂಗ ಕೊಲೆ ಪ್ರಕರಣದಲ್ಲಿ ಸಚಿವ ಶಿವರಾಜ್ ತಂಗಡಗಿಯ ಆಪ್ತ ಹನುಮೇಶ್ ನಾಯಕ್ ಮಹಾಂತೇಶ್ ನಾಯಕ್ ದುರ್ಗಪ್ಪ ನಂದೀಶ್ ಸೇರಿ 9 ಜನರ ವಿರುದ್ದ ಕೇಸ್ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಶಿವರಾಜ್ ತಂಗಡಗಿ ಅಂದು ಸಚಿವ ಸ್ಥಾನ ಕಳೆದುಕೊಂಡಿದ್ದರು.
Key words: Yallalinga, murder case, All , accused, acquitted