ಅಪಾಯಮಟ್ಟ ಮೀರಿ ಹರಿಯುತ್ತಿರುವ ಯಮುನಾನದಿ: ದೆಹಲಿಯಲ್ಲಿ ಪ್ರವಾಹದ ಆತಂಕ..

ನವದೆಹಲಿ,ಜುಲೈ,13,2023(www.justkannada.in): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಯಮುನಾ ನದಿ ದಾಖಲೆಯ ಮಟ್ಟದಿಂದ ಉಕ್ಕಿ ಹರಿಯುತ್ತಿದ್ದು, ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ದೆಹಲಿಯ ತಗ್ಗು ಪ್ರದೇಶಗಳು  ಜಲಾವೃತವಾಗಿವೆ.  ಕಾಶ್ಮೀರಿ ಘಾಟ್ ತೀಸ್ ಹಜಾರಿ ಕೋರ್ಟ್, ಸೀಲಂಪುರ  ಸಂಪರ್ಕಿಸುವ ರಸ್ತೆ ಬಂದ್ ಆಗಿವೆ. ಸಾಕಷ್ಟು ರಸ್ತೆಗಳು, ಮನೆಗಳು ಜಲಾವೃತವಾಗಿವೆ. ಹರಿಯಾಣದ ಹತ್ನಿಕುಂಡ್ ಬ್ಯಾರೇಜ್ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಯಮುನಾ ನದಿಯಲ್ಲಿ ನೀರಿನ ಮಟ್ಟ 208.46 ಮೀಟರ್ ಆಗಿತ್ತು. ಪ್ರಸ್ತುತ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಮೂರು ಮೀಟರ್‌ಗಳಷ್ಟು ಹೆಚ್ಚಿದೆ.

ಅರವಿಂದ್ ಕೇಜ್ರಿವಾಲ್ ಸರ್ಕಾರ ಮಧ್ಯ ಪ್ರವೇಶಿಸಿ ಬ್ಯಾರೇಜ್‌ನಿಂದ ನೀರು ಬಿಡುವುದನ್ನು ನಿಲ್ಲಿಸುವಂತೆ ಕೇಂದ್ರವನ್ನು ಒತ್ತಾಯಿಸಿತ್ತು, ಆದರೆ ಕೇಂದ್ರವು ಬ್ಯಾರೇಜ್‌ನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಿದೆ ಎಂದು ಉತ್ತರಿಸಿದೆ. ನೀರಿನ ಮಟ್ಟ ಏರಿಕೆ ಆಗುತ್ತಿದ್ದಂತೆ ದೆಹಲಿ ಸಿಎಂ ಕೇಜ್ರಿವಾಲ್ ತುರ್ತು ಸಭೆ ಕರೆದಿದ್ದಿದ್ದು ಪ್ರವಾಹ ಪರಿಸ್ಥಿತಿ, ಜನರ ಸ್ಥಳಾಂತರ ಕುರಿತು ಚರ್ಚಿಸಲಿದ್ದಾರೆ.

Key words: Yamuna river -flowing – danger-level-Fear – floods – Delhi..