Saturday, September 12, 2026

BDA Apartments

ಯತ್ನಾಳ್ ಓರ್ವ ಮಾನಸಿಕ ಅಸ್ವಸ್ಥ-ಡಿಸಿಎಂ ಡಿಕೆ ಶಿವಕುಮಾರ್ ಕಿಡಿ BDA JK_Adv BDA Adv
Home Front Page ಯತ್ನಾಳ್ ಓರ್ವ ಮಾನಸಿಕ ಅಸ್ವಸ್ಥ-ಡಿಸಿಎಂ ಡಿಕೆ ಶಿವಕುಮಾರ್ ಕಿಡಿ

ಯತ್ನಾಳ್ ಓರ್ವ ಮಾನಸಿಕ ಅಸ್ವಸ್ಥ-ಡಿಸಿಎಂ ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು,ನವೆಂಬರ್,1,2024 (www.justkannada.in):  ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್,  ಯತ್ನಾಳ್ ಓರ್ವ ಮಾನಸಿಕ ಅಸ್ವಸ್ಥ. ಮಾನಸಿಕವಾಗಿ ಅಸ್ವಸ್ಥರಾಗಿರುವ, ಹುಚ್ಚಾಸ್ಪತ್ರೆ ಸೇರಬೇಕಿರುವ ವ್ಯಕ್ತಿಗಳ ಬಗ್ಗೆ ನಾನು ಮಾತನಾಡಲ್ಲ ಎಂದು ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಯೋಜನೆಗಳ ವಿರುದ್ದ ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನಾವು ಜಾರಿಗೆ ತಂದಿರುವ ಜನಪರ ಗ್ಯಾರಂಟಿ ಯೋಜನೆಗಳನ್ನು ವಿರೋಧ ಪಕ್ಷದವರಿಂದ ಮಾಡಲು ಆಗಲಿಲ್ಲ. ವಿರೋಧ ಪಕ್ಷದವರಿಗೆ ರಾಜಕೀಯ ಹೊರತಾಗಿ ಯಾವ ವಿಚಾರಗಳೂ ಸಿಗುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಸಂಸಾರಗಳನ್ನು ಹಾಳು ಮಾಡುತ್ತವೇ ಎಂದು ಹೇಳಿದ್ದರು. ಆದರೆ ಅವರು ಹೇಳಿದಂತೆ ಆಗಲಿಲ್ಲ. ನಮ್ಮ ಕೆಲಸಗಳನ್ನು ನೋಡಿ, ಹೊಟ್ಟೆಕಿಚ್ಚು ಪಡುತ್ತಿದ್ದಾರೆ  ಎಂದು ಹರಿಹಾಯ್ದರು.

Key words: Yatnal, mentally, ill, DCM, DK Shivakumar