Friday, August 14, 2026

BDA Apartments

Home Front Page ಯಡಿಯೂರಪ್ಪ ಸಿಎಂ ಸ್ಥಾನ ಎಷ್ಟು ಭದ್ರ? ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯೆ ಹೀಗಿತ್ತು…

ಯಡಿಯೂರಪ್ಪ ಸಿಎಂ ಸ್ಥಾನ ಎಷ್ಟು ಭದ್ರ? ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯೆ ಹೀಗಿತ್ತು…

ಮೈಸೂರು, ಮೇ 23, 2021 (www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಸಿಎಂ ಆಗಿರ್ತಾರೆ ಎಂದು ಮೈಸೂರಿನಲ್ಲಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ರಾಜ್ಯದಲ್ಲಿ ಯಡಿಯೂರಪ್ಪನವರ ಆಡಳಿತ  ಉತ್ತಮವಾಗಿದೆ. ಕೊರೊನಾ ಸಂದರ್ಭದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ.

ನಾಯಕತ್ವ ಬದಲಾವಣೆ ಕೇವಲ ಊಹಾಪೋಹ ಅಷ್ಟೇ ಎಂದು ಸಚಿವರು ತಿಳಿಸಿದ್ದಾರೆ.

ಮುಂದಿನ ಚುನಾವಣೆಯೂ ಕೂಡಾ ಯಡಿಯೂರಪ್ಪನವರ ನೇತೃತ್ವದಲ್ಲೇ ನಡೆಯಲಿದೆ ಎಂದು ಮುರುಗೇಶ್ ನಿರಾಣಿ ಸ್ಪಷ್ಟನೆ ನೀಡಿದ್ದಾರೆ.