Thursday, August 13, 2026

BDA Apartments

Home Front Page ಎಂಎಲ್ಸಿ ಸ್ಥಾನಕ್ಕಾಗಿ ಲಾಬಿ ನಡೆಸಿಲ್ಲ: ಯಡಿಯೂರಪ್ಪ ಪುತ್ರ ವಿಜಯೇಂದ್ರ ಸ್ಪಷ್ಟನೆ

ಎಂಎಲ್ಸಿ ಸ್ಥಾನಕ್ಕಾಗಿ ಲಾಬಿ ನಡೆಸಿಲ್ಲ: ಯಡಿಯೂರಪ್ಪ ಪುತ್ರ ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು, 26, 2020 (www.justkannada.in):  MLC ಸ್ಥಾನಕ್ಕಾಗಿ ಲಾಬಿ ನಡೆಸಿಲ್ಲ ಎಂದು ಸಿಎಂ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿವೈ ವಿಜಯೇಂದ್ರ, ಪಕ್ಷದಲ್ಲಿ ನನಗಿಂತ ಹಿರಿಯರು ಅನೇಕ ಮಂದಿ ಇದ್ದಾರೆ. ಹಲವು ದಶಕಗಳಿಂದ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿದ್ದಾರೆ. ಈಗ ಅವಕಾಶಕ್ಕಾಗಿ ಕಾದಿದ್ದಾರೆ. ನನ್ನ ಆದ್ಯತೆ ಏನಿದ್ದರೂ ಪಕ್ಷದ ಸಂಘಟನೆಯಾಗಿದೆ ಎಂದು ತಿಳಿಸಿದ್ದಾರೆ.

ಕೆಲ ಮಾಧ್ಯಮಗಳು ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಬಿ ವೈ ವಿಜಯೇಂದ್ರ ಅವರು ಎಂಎಲ್ಸಿ ಸ್ಥಾನ ಗಿಟ್ಟಿಸಿಕೊಳ್ಳಲು ಯತ್ನಿಸುತ್ತಿದ್ದಾರೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ದುಡಿದು ಯಶಸ್ಸುಗೊಳಿಸಿದ್ದಕ್ಕೆ ಪಕ್ಷದಿಂದ ಈ ಬಹುಮಾನ ಸಿಗಲಿದೆ ಎಂದು ಸುದ್ದಿ ಹಬ್ಬಿಸಲಾಗಿದೆ. ಆದರೆ ಇದರಲ್ಲಿ ಹುರುಳಿಲ್ಲ ಎಂದು ತಿಳಿಸಿದ್ದಾರೆ.