ಚಳಿ-ಮಳೆಗೆ ನಲುಗುತ್ತಿದೆ ರಾಜ್ಯ: ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ಡಿಸೆಂಬರ್ 11, 2022 (www.justkannada.in): ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗಲಿದ್ದು, 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ನಿರಂತರಮಳೆಯಾಗುತ್ತಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಇದೇ ವೇಳೆ ರಾಜ್ಯದ ಪ್ರದೇಶಗಳಲ್ಲಿ ವಿಪರೀತ ಚಳಿಯ ವಾತಾವರಣ ಮುಂದುವರೆದಿದೆ.