Saturday, August 15, 2026

BDA Apartments

Home Front Page ಜಗತ್ತನ್ನು ಒಂದುಗೂಡಿಸುವ ಯೋಗ: ಪ್ರಧಾನಿ ಮೋದಿ ವಿಡೀಯೋ ಸಂದೇಶ

ಜಗತ್ತನ್ನು ಒಂದುಗೂಡಿಸುವ ಯೋಗ: ಪ್ರಧಾನಿ ಮೋದಿ ವಿಡೀಯೋ ಸಂದೇಶ

ಬೆಂಗಳೂರು, ಜೂನ್ 21, 2023 (www.justkannada.in): ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಯೋಗ ದಿನದ ಅಂಗವಾಗಿ ವಿಡಿಯೊ ಸಂದೇಶ ಕಳುಹಿಸಿದ್ದಾರೆ.

ಯೋಗವು ಜಾಗತಿಕ ಚೇತನವಾಗಿದೆ ಮತ್ತು ಜಗತ್ತನ್ನು ಒಂದುಗೂಡಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಯೋಗವು ಜಗತ್ತನ್ನು ಒಂದುಗೂಡಿಸುತ್ತದೆ. ‘ಏಕ್ ಭಾರತ್, ಶ್ರೇಷ್ಠ್ ಭಾರತ್’ ಎಂದು ನಾವು ಭಾರತವನ್ನು ವಿಶ್ವಕ್ಕೆ ಪ್ರತಿನಿಧಿಸಬೇಕಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಇನ್ನು ದೆಹಲಿ ಸೇರಿದಂತೆ ದೇಶಾದ್ಯಂತ, ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ, ಹಲವು ಸಂಘ ಸಂಸ್ಥೆಗಳು, ಶಾಲೆ-ಕಾಲೇಜುಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯುತ್ತಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಬೆಳಗ್ಗೆಯೇ ರಾಷ್ಟ್ರಪತಿ ಭವನದಲ್ಲಿ ಅಲ್ಲಿನ ಸಿಬ್ಬಂದಿಗಳು ಹಾಗೂ ಇತರರೊಂದಿಗೆ ಯೋಗದಲ್ಲಿ ಪಾಲ್ಗೊಂಡಿದ್ದರು.