Thursday, August 13, 2026

BDA Apartments

Home Crime ಯೋಗೀಶ್ ಗೌಡ ಹತ್ಯೆ ಪ್ರಕರಣ: ಕೆಎಎಸ್ ಅಧಿಕಾರಿಯನ್ನ ವಶಕ್ಕೆ ಪಡೆದ ಸಿಬಿಐ.

ಯೋಗೀಶ್ ಗೌಡ ಹತ್ಯೆ ಪ್ರಕರಣ: ಕೆಎಎಸ್ ಅಧಿಕಾರಿಯನ್ನ ವಶಕ್ಕೆ ಪಡೆದ ಸಿಬಿಐ.

ಧಾರವಾಡ,ಜುಲೈ,8,2021(www.justkannada.in):   ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ.jk

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನ ಬಂಧಿಸಲಾಗಿದೆ. ಸೋಮು ನ್ಯಾಮಗೌಡ ಅವರು ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಮಾಜಿ ಆಪ್ತ ಸಹಾಯಕರಾಗಿದ್ದಾರೆ. ಈಗಾಗಲೇ ಹಲವು ಬಾರಿ ಸೋಮು ಅವರನ್ನು ಸಿಬಿಐ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿತ್ತು. ಇದೀಗ ಇಂದು ಬೆಳಗ್ಗೆ ಗದಗದಲ್ಲಿ ನ್ಯಾಮಗೌಡ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಗೆ ಬರಲಿದ್ದು ಇಂದೇ ಈ ಬೆಳವಣಿಗೆ ನಡೆದಿರುವುದು ಮಹತ್ವ ಪಡೆದುಕೊಂಡಿದೆ.

Key words: Yogesh Gowda- murder –case-CBI – custody – KAS officer.