Sunday, September 27, 2026

BDA Apartments

ಮಾಜಿ ಸಚಿವ ವಿನಯ್ ಕುಲಕರ್ಣಿ ಕೋರ್ಟ್ ಗೆ ಹಾಜರುಪಡಿಸಿದ ಸಿಬಿಐ ತಂಡ… BDA JK_Adv BDA Adv
Home Front Page ಮಾಜಿ ಸಚಿವ ವಿನಯ್ ಕುಲಕರ್ಣಿ ಕೋರ್ಟ್ ಗೆ ಹಾಜರುಪಡಿಸಿದ ಸಿಬಿಐ ತಂಡ…

ಮಾಜಿ ಸಚಿವ ವಿನಯ್ ಕುಲಕರ್ಣಿ ಕೋರ್ಟ್ ಗೆ ಹಾಜರುಪಡಿಸಿದ ಸಿಬಿಐ ತಂಡ…

ಧಾರವಾಡ, ನವೆಂಬರ್,5,2020(www.justkannada.in):  ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನ ಸಿಬಿಐ ತಂಡ ಧಾರವಾಡ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದೆ.

ಪ್ರಕರಣ ಸಂಬಂಧ ಇಂದು ಬೆಳಿಗ್ಗೆ  ವಿನಯ್ ಕುಲಕರ್ಣಿ ಅವರನ್ನ ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದರು. ಬಳಿಕ ವಿನಯ್ ಕುಲಕರ್ಣಿ ಅವರನ್ನ ಬಂಧಿಸಿದ ಸಿಬಿಐ ತಂಡ ನಂತರ ವೈದ್ಯಕೀಯ ತಪಾಸಣೆಗೊಳಪಡಿಸಿತು.

ಇದೀಗ ಧಾರವಾಡ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾಯಾಧೀಶೆ ಷಡಕ್ಷರಿ ಅವರ ಮುಂದೆ ವಿನಯ್ ಕುಲಕರ್ಣಿ ಅವರನ್ನ ಹಾಜರುಪಡಿಸಲಾಗಿದ್ದು ಸಿಬಿಐ ತನ್ನ ವಶಕ್ಕೆ ಕೇಳುವ ಸಾಧ್ಯತೆ ಇದೆ. ಇನ್ನು ವಿನಯ್ ಕುಲಕರ್ಣಿ ಅವರ ಬಂಧನ ಖಂಡಿಸಿ ಬೆಂಬಲಿಗರು ಜಿಲ್ಲಾ ನ್ಯಾಯಾಲಯದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

Key words: yogesh gowda-murder case- CBI- team – court – former minister -Vinay Kulkarni.