Sunday, August 23, 2026

BDA Apartments

Home Crime ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ.

ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ.

ಬೆಂಗಳೂರು,ಏಪ್ರಿಲ್,8,2024 (www.justkannada.in):  ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ರದ್ದು ಕೋರಿ   ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್  ವಜಾಗೊಳಿಸಿದೆ.

ಈ ಮೂಲಕ  ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಮತ್ತೆ ಬಿಗ್ ಶಾಕ್ ನೀಡಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ನೀಡಲಾಗಿತ್ತು. ಧಾರವಾಡ ಪ್ರವೇಶಕ್ಕೆ ನಿರ್ಬಂಧ ಕೂಡ ವಿಧಿಸಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅವರು ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ  ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ಪೀಠ ಪ್ರಕರಣ ರದ್ದುಗೊಳಿಸಲು ನಿರಾಕರಿಸಿ ಅರ್ಜಿಯನ್ನ ವಜಾಗೊಳಿಸಿದೆ. ಅಲ್ಲದೆ ಸಿಬಿಐ ಪರ ಅಭಿಯೋಜಕರಿಗೆ ಹೈಕೋರ್ಟ್ ಸಾಕ್ಷ್ಯ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದೆ.

Key words: Yogesh Gowda, murder case, Vinay Kulkarni