ವಿಚ್ಛೇದಿತ ಮಹಿಳೆ ಮದುವೆಯಾಗಿ ಮಗುವಾದ ಬಳಿಕ ಕೈಕೊಟ್ಟ ಯುವಕ: ಹಣ ಪಡೆದು ಪರಾರಿ?

ಬೆಂಗಳೂರು, ಜನವರಿ, 10,2026 (www.justkannada.in):  ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ ಆಕೆ ಜತೆ ಸಂಸಾರ ನಡೆಸಿ ಮಗುವಾದ ನಂತರ ಯುವಕ ಆಕೆಗೆ ಕೈಕೊಟ್ಟು  ಚಿನ್ನಾಭರಣ ಸೇರಿ ಸುಮಾರು 36 ಲಕ್ಷ ರೂ ಹಣ ಪಡೆದು ಪರಾರಿಯಾಗಿರುವ ಆರೋಪ ಕೇಳಿ ಬಂದಿದೆ.

ಬೆಂಗಳೂರಿನ ಬನಶಂಕರಿಯ ಮೋಹನ್ ರಾಜ್  ವಿರುದ್ಧ ಮಹಿಳೆ ಈ ಗಂಭೀರ ಆರೋಪ ಮಾಡಿದ್ದಾರೆ, ಈ ಕುರಿತು ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ ಐಆರ್ ದಾಖಲಾಗಿದೆ.

ಸಂತ್ರಸ್ತೆಯು 2021ರಲ್ಲಿ ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದರು. ಮೊದಲ ಮದುವೆಯ ವಿಚಾರ ಸಂಪೂರ್ಣವಾಗಿ ತಿಳಿದಿದ್ದರೂ ಮೋಹನ್ ರಾಜ್ ಮದುವೆಯಾಗಿದ್ದಾನೆ. ಮೋಹನ್ ರಾಜ್ ಮತ್ತು ಮಹಿಳೆ ಇಬ್ಬರ ನಡುವೆ 2022ರಲ್ಲಿ ಮದುವೆ ನಡೆದಿತ್ತು. 2023ರ ಫೆಬ್ರವರಿಯಲ್ಲಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಆದರೆ 2025ರಲ್ಲಿ ಏಕಾಏಕಿ ಮನೆ ಬಿಟ್ಟು ಹೋದ ಮೋಹನ್ ರಾಜ್ ಇಂದಿಗೂ ಪತ್ತೆಯಾಗಿಲ್ಲ ಎನ್ನಲಾಗಿದೆ

ಮದುವೆಯಾದ ಬಳಿಕ ಹೊಸ ಮನೆ ಕಟ್ಟೋಣ, ಹೊಸ ಜೀವನ ಶುರು ಮಾಡೋಣ ಎಂದು ನಂಬಿಸಿ ಮಹಿಳೆಯಿಂದ ಮೋಹನ್ ರಾಜ್  ಹಣ ಪಡೆದಿದ್ದಾನೆ ಎಂಬ ಆರೋಪವಿದೆ. ಚಿನ್ನಾಭರಣ ಅಡವಿಟ್ಟು, ಸಾಲ ಪಡೆದು ಒಟ್ಟು 36 ಲಕ್ಷ ರೂಪಾಯಿ ನೀಡಿದ್ದೇನೆ. ಈಗ ಹಣ ಕೇಳಿದರೆ ನ್ಯಾಯ ಕೇಳಲು ಹೋದರೆ ಮೋಹನ್ ರಾಜ್ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

Key words: young man, divorced, woman, married